KAMBALA ರಮಾನಾಥ ರೈ ನೇತೃತ್ವದ ಬಂಟ್ವಾಳ ಕಂಬಳಕ್ಕೆ ಅದ್ದೂರಿ ಚಾಲನೆ
ಬಂಟ್ವಾಳ: ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಈ ಸೀಸನ್ ನ ಕೊನೆಯ ಕಂಬಳವಾಗಿರುವ ಬಂಟ್ವಾಳ ತಾಲೂಕಿನ ನಾವೂರಿನಲ್ಲಿ 11ನೇ ವರ್ಷದ ಮೂಡೂರು ಪಡೂರು ಹೆಸರಿನ ಬಂಟ್ವಾಳ ಕಂಬಳಕ್ಕೆ ಅದ್ದೂರಿಯ ಚಾಲನೆ ದೊರಕಿದೆ.
ಸೊಲೂರು ಕರ್ನಾಟಕ ಆರ್ಯ ಈಡಿಗ ಮಹಾ ಸಂಸ್ಥಾನದ ಪೀಠಾಧಿಪತಿ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಉದ್ಘಾಟಿಸಿ, ಶುಭ ಹಾರೈಸಿದರು. ಮಾಣಿಲ ಶ್ರೀ ಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಮಾತನಾಡಿ, ಭಾವೈಕ್ಯಕ್ಕೆ ಕಂಬಳ ಮುನ್ನುಡಿಯಾಗಲಿ ಎಂದು ಆಶಿಸಿದರು. ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಪಿಯೂಸ್ ಎಲ್. ರೋಡ್ರಿಗಸ್ ಮುಂದಾಳತ್ವದಲ್ಲಿ ಕಂಬಳ ನಡೆಯುತ್ತಿದೆ.
ಕಂಬಳ ಸಮಿತಿ ಗೌರವಾಧ್ಯಕ್ಷ, ಮಾಜಿ ಸಚಿವ ಬಿ.ರಮಾನಾಥ ರೈಅಧ್ಯಕ್ಷತೆ ವಹಿಸಿದ್ದರು.ಅಲ್ಲಿಪಾದೆ ಸಂತ ಅಂತೊನಿ ಚರ್ಚ್ ಧರ್ಮಗುರು ಫೆಡ್ರಿಕ್ ಮೊಂತೆರೊ, ನಿವೃತ್ತ ತಹಸೀಲ್ದಾರ್ ಮೋಹನ ರಾವ್, ನಾವೂರು ಗ್ರಾಪಂ ಅಧ್ಯಕ್ಷ ಉಮೇಶ್ ಕುಲಾಲ್, ಬಂಟ್ವಾಳ ಪುರಸಭಾಧ್ಯಕ್ಷ ಮಹಮ್ಮದ್ ಶರೀಫ್, ಪತ್ರಕರ್ತ ವಾಲ್ಟರ್ ನಂದಳಿಕೆ, ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ, ನಾವೂರು ಗ್ರಾಪಂ ಉಪಾಧ್ಯಕ್ಷೆ ಲವೀನಾ ವಿಲ್ಮಾ ಮೋರಸ್, ಪ್ರಮುಖರಾದ ಜೆ.ಆರ್.ಲೋಬೊ, ಕಂಬಳ ಸಮಿತಿ ಸಂಚಾಲಕ ಪದ್ಮಶೇಖರ ಜೈನ್, ಕಾರ್ಯಾಧ್ಯಕ್ಷ ಚಂದ್ರಪ್ರಕಾಶ್ ಶೆಟ್ಟಿ, ಸುದೀಪ್ ಕುಮಾರ್ ಶೆಟ್ಟಿ, ಮಾಯಿಲಪ್ಪ ಸಾಲಿಯಾನ್, ಬೇಬಿ ಕುಂದರ್, ಅವಿಲ್ ಮಿನೇಜಸ್, ಸುದರ್ಶನ್ ಜೈನ್, ಅಬ್ಬಾಸ್ ಆಲಿ ಡೆನ್ಝಿಲ್ ನೊರೊನ್ಹ, ಶಬೀರ್ ಮತ್ತಿತರರು ಇದ್ದರು. ಕಂಬಳ ಸಮಿತಿ ಅಧ್ಯಕ್ಷ ಪಿಯೂಸ್ ಎಲ್ .ರೋಡ್ರಿಗಸ್ ಸ್ವಾಗತಿಸಿದರು. ಬಾಲಕೃಷ್ಣ ಆಳ್ವ ಕೊಡಾಜೆ ಮತ್ತು ರಾಜೀವ ಕಕ್ಯಪದವು ಕಾರ್ಯಕ್ರಮ ನಿರ್ವಹಿಸಿದರು.