ಅಮಿತ್ ಶಾ ಸಮ್ಮುಖ ಬಿಜೆಪಿ ಸೇರಿದ ವಿಧಾನಪರಿಷತ್ ಸಭಾಪತಿ ಹೊರಟ್ಟಿ

ಅಮಿತ್ ಶಾ ಸಮ್ಮುಖ ಬಿಜೆಪಿ ಸೇರಿದ ವಿಧಾನಪರಿಷತ್ ಸಭಾಪತಿ ಹೊರಟ್ಟಿ

STATE POLITICS: ಕೇಂದ್ರ ಸಚಿವ ಅಮಿತ್ ಶಾ ಸಮ್ಮುಖ ಬಿಜೆಪಿಗೆ ಜೆಡಿಎಸ್ ನ ಹಿರಿಯ ರಾಜಕಾರಣಿ, ವಿಧಾನಪರಿಷತ್ತು ಸಭಾಪತಿ ಬಸವರಾಜ ಹೊರಟ್ಟಿ ಸೇರ್ಪಡೆಗೊಂಡಿದ್ದಾರೆ.


ಬೆಂಗಳೂರು: ವಿಧಾನಪರಿಷತ್ತು ಸಭಾಪತಿ ಬಸವರಾಜ ಹೊರಟ್ಟಿ ಜೆಡಿಎಸ್ ತೊರೆದು ಮಂಗಳವಾರ ಬಿಜೆಪಿಗೆ ಕೇಂದ್ರ ಗೃಹಸಚಿವ ಅಮಿತ್ ಶಾ ಸಮ್ಮುಖ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ತಾಜ್ ವೆಸ್ಟೆಂಡ್ ಹೋಟೆಲ್ ನಲ್ಲಿ ಶಾ ಹೂಗುಚ್ಛ ನೀಡುವ ಮೂಲಕ ಹೊರಟ್ಟಿ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಸಿಎಂ ಜಗದೀಶ ಶೆಟ್ಟರ್, ಹಲವು ಸಚಿವರು, ಶಾಸಕರು ಉಪಸ್ಥಿತರಿದ್ದರು. 

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಹೊರಟ್ಟಿ, ಬದಲಾದ ರಾಜಕೀಯ ಸನ್ನಿವೇಶ, ಮತದಾರರ ಅಭಿಪ್ರಾಯದಂತೆ ನಾನು ಬಿಜೆಪಿ ಸೇರಿದ್ದೇನೆ. ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವೆ ಎಂದರು. ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಸತತವಾಗಿ ಏಳು ಬಾರಿ ವಿಧಾನ ಪರಿಷತ್ ಗೆ ಆಯ್ಕೆಯಾಗಿದ್ದ ಹೊರಟ್ಟಿ, ಮುಂದಿನ ಚುನಾವಣೆಯನ್ನು ಬಿಜೆಪಿಯಿಂದ ಎದುರಿಸಲು ನಿರ್ಧರಿಸಿದ್ದಾರೆ. ಇದರೊಂದಿಗೆ ಜೆಡಿಎಸ್ ನ ಪ್ರಬಲ ನಾಯಕರೊಬ್ಬರು ಬಿಜೆಪಿ ಸೇರಿದಂತಾಗಿದೆ.

 

Ads on article

Advertise in articles 1

ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ

Advertise under the article

ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ