Bomb Threat: ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ
Friday, May 20, 2022
ಬೆಂಗಳೂರು: ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆಯ ಕರೆಬಂದಿದೆ. ಏರ್ ಪೋರ್ಟ್ ಪೊಲೀಸರು ತೀವ್ರ ತಪಾಸಣೆ ನಡೆಸಿದರು..
ಅಪರಿಚಿತ ವ್ಯಕ್ತಿಯೊಬ್ಬ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನನಿಲ್ದಾಣದಲ್ಲಿ ಬಾಂಬ್ ಇಡಲಾಗಿದೆ ಎಂದು ಕರೆ ಮಾಡಿ, ಕಾಲ್ ಕಟ್ ಮಾಡಿದ್ದ ಎನ್ನಲಾಗಿದೆ. ಇದರಿಂದಾಗಿ ಅಲರ್ಟ್ ಆಗಿರುವ ಪೊಲೀಸರು ವಿಮಾನ ನಿಲ್ದಾಣದಲ್ಲಿ ತೀವ್ರ ತಪಾಸಣೆ ಮಾಡಿದರು.