COURT NEWS: ಎಫ್ಐಆರ್ ರದ್ದುಪಡಿಸಿ: ಪಿಎಸ್ಸೈ ನೇಮಕಾತಿ ಹಗರಣದ ಆರೋಪಿಗಳಿಂದ ಹೈಕೋರ್ಟ್ ಮೊರೆ
Thursday, May 5, 2022
ಬೆಂಗಳೂರು: ಪಿಎಸ್‌ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಆರೋಪಿಗಳಾದ ಜಾಗೃತ್ ಮತ್ತು ರಚನಾ ಹನುಮಂತ ಹೈಕೋರ್ಟ್ ಮೊರೆ ಹೋಗಿದ್ದಾರೆ. ಪ್ರಕರಣದಲ್ಲಿ 17ನೇ ಆರೋಪಿ ರಚನಾ ಮತ್ತು ಮೊದಲನೇ ಆರೋಪಿ ಎಸ್. ಜಾಗೃತ್ ಹೈಕೋರ್ಟ್‌ಗೆ ಪ್ರತ್ಯೇಕ ತಕರಾರು ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಗಳು ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ರಜಾಕಾಲದ ಏಕ ಸದಸ್ಯ ನ್ಯಾಯಪೀಠದ ಮುಂದೆ ಗುರುವಾರ ವಿಚಾರಣೆಗೆ ಬಂದವು. ಕೆಲಕಾಲ ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ ಮೇ 19ರಂದು ವಿಚಾರಣೆಗೆ ಕೈಗೆತ್ತಿಕೊಳ್ಳುವುದಾಗಿ ತಿಳಿಸಿದೆ.