MEETING: 28ರಂದು ಮಂಗಳೂರು, ಅಮರಸುಳ್ಯ, ಉಳ್ಳಾಲದಲ್ಲಿ ದೇಶಭಕ್ತಿ ಜಾಗೃತಿ ಕಾರ್ಯಕ್ರಮ: ಸಚಿವ ಸುನಿಲ್ ಕುಮಾರ್
ಮಂಗಳೂರು: ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಆಚರಿಸುತ್ತಿರುವ ಈ ಸಂದರ್ಭ ಇದೇ ಮೇ.28ರಂದು ಮಂಗಳೂರಿನ ಕೇಂದ್ರ ಮೈದಾನ, ಸುಳ್ಯ ತಾಲೂಕಿನ ಅಮರ ಸುಳ್ಯ ಹಾಗೂ ಉಳ್ಳಾಲ ತಾಲೂಕಿನ ಉಳ್ಳಾಲದಲ್ಲಿ ಅಮೃತ ಭಾರತಿಗೆ ಕನ್ನಡದಾರತಿ ಎಂಬ ಕಾರ್ಯಕ್ರಮದಡಿ ದೇಶಭಕ್ತಿ ಜಾಗೃತಿ ಮೂಡಿಸುವ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ, ಸಾರ್ವಜನಿಕರು ಸ್ವಯಂ ಪ್ರೇರಣೆಯಿಂದ ಭಾಗವಹಿಸಬೇಕು ಎಂದು ಇಂಧನ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನೀಲ್ ಕುಮಾರ್ ಅವರು ಕರೆ ನೀಡಿದರು.
ಮೇ.17ರ ಮಂಗಳವಾರ ನಗರದ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಅಮೃತ ಭಾರತಿಗೆ ಕನ್ನಡದಾರತಿ ಎಂಬ ಕಾರ್ಯಕ್ರಮದ ಆಯೋಜನೆ ಕುರಿತಂತೆ ಅಧಿಕಾರಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳೊಂದಿಗೆ ಹಮ್ಮಿಕೊಳ್ಳಲಾಗಿದ್ದ ಪೂರ್ವಭಾವಿ ಸಿದ್ದತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವಿಧಾನಪರಿಷತ್ ಸದಸ್ಯರಾದ ಪ್ರತಾಪಸಿಂಹ ನಾಯಕ್, ದಿ. ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್‍ನ ಅಧ್ಯಕ್ಷರಾದ ಸಂತೋಷ್ ರೈ ಬೋಳಿಯಾರ್, ಅಪರ ಜಿಲ್ಲಾಧಿಕಾರಿ ಡಾ. ಕೃಷ್ಣಮೂರ್ತಿ ವೇದಿಕೆಯಲ್ಲಿದ್ದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಪ್ರಸ್ತಾವಿಕವಾಗಿ ಮಾತನಾಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಸ್ವಾಗತಿಸಿದರು. ಆಳ್ವಾಸ್ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಾದ ಡಾ. ಮೋಹನ್ ಆಳ್ವ, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷ ಶ್ರೀನಾಥ್, ಮಂಗಳೂರು ತಾಲೂಕು ಅಧ್ಯಕ್ಷ ಮಂಜುನಾಥ ರೇವಣಕರ್, ಸಾಹಿತಿಗಳು ಸೇರಿದಂತೆ ಜಿಲ್ಲೆಯ ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಪದಾಧಿಕಾರಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.