MEETING: ಗ್ರಾಮಗಳ ಅಭಿವೃದ್ಧಿಯಲ್ಲಿ ಪಂಚಾಯತ್ ಪಾತ್ರ ಮಹತ್ವದ್ದು: ಡಾ. ಕುಮಾರ್
Wednesday, May 18, 2022
ಗ್ರಾಮಗಳ ಅಭಿವೃದ್ಧಿಯಲ್ಲಿ ಗ್ರಾಮ ಪಂಚಾಯತ್ ಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ್ ಅವರು ಅಭಿಪ್ರಾಯಪಟ್ಟರು.
ಅವರು ನಗರದ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಮೇ.18ರ ಬುಧವಾರ ಮಂಗಳೂರು ಮತ್ತು ಮೂಡಬಿದ್ರೆ ತಾಲೂಕುಗಳ ಗ್ರಾಮ ಪಂಚಾಯತ್‍ನ ಅಧ್ಯಕ್ಷರು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ, ಪಂಚಾಯತ್ ರಾಜ್ ವ್ಯವಸ್ಥೆ ಹಾಗೂ ಗ್ರಾಮಗಳ ಏಳಿಗೆಗೆ ಸರ್ಕಾರ ಜಾರಿಗೊಳಿಸಿರುವ ವಿವಿಧ ಯೋಜನೆಗಳ ಕುರಿತು ಹಮ್ಮಿಕೊಂಡಿದ್ದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸಭೆಯಲ್ಲಿ ಪಂಚಾಯತ್ ಅಭಿವೃಧ್ಧಿ ಅಧಿಕಾರಿಗಳು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳು, ಮಂಗಳೂರು ಮತ್ತು ಮೂಡಬಿದ್ರೆ ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಸಂಬಂದಿಸಿದ ಅಧಿಕಾರಿಗಳು ಉಪಸ್ಥಿತರಿದ್ದರು.