POLITICS: ಬಿಲ್ಲವ ಸಮುದಾಯದ ಸಚಿವರ ರಾಜೀನಾಮೆಗೆ ಮಾಜಿ ಸಚಿವ ರೈ ಒತ್ತಾಯ
Friday, May 20, 2022
Mangalore: ಬ್ರಹ್ಮಶ್ರೀ ನಾರಾಯಣಗುರುಗಳ ಪಠ್ಯವನ್ನು 10ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಿಂದ ಕೈಬಿಟ್ಟಿರುವ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಬಿ.ರಮಾನಾಥ ರೈ, ಬಿಲ್ಲವ ಸಮುದಾಯದ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತರೆ ಹಿಂದುಳಿದ ವರ್ಗಗಳ ಸಮುದಾಯಗಳಿಗೆ ನೋವುಂಟು ಮಾಡಿದೆ. ಅಲ್ಲದೇ ಸಮಾಜಕ್ಕೂ ನೋವುಂಟು ಮಾಡಿದೆ. ಜಿಲ್ಲೆಯಲ್ಲಿ ನಾರಾಯಣ ಗುರುಗಳ ಅಪಾರ ಅನುಯಾಯಿಗಳಿದ್ದಾರೆ. ಅವರ ಮತಗಳನ್ನು ಪಡೆದು ಬಿಜೆಪಿ ಅಧಿಕಾರಕ್ಕೆ ಬಂದಿದೆ. ಈಗ ಅವರನ್ನು ನೆನಪಿಸಿಕೊಳ್ಳುವಲ್ಲಿ ಸರ್ಕಾರ ವಿಫಲವಾಗಿದೆ ಎಂದರು.