SDPI ON KANYANA INCIDENT:  ಜಿಲ್ಲೆಯ ಶಾಂತಿ ಕದಡಲು ಪ್ರಯತ್ನಿಸುತ್ತಿರುವ ಸಂಘಪರಿವಾರದ ನಾಯಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಿ:-ಶಾಹುಲ್ ಹಮೀದ್

SDPI ON KANYANA INCIDENT: ಜಿಲ್ಲೆಯ ಶಾಂತಿ ಕದಡಲು ಪ್ರಯತ್ನಿಸುತ್ತಿರುವ ಸಂಘಪರಿವಾರದ ನಾಯಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಿ:-ಶಾಹುಲ್ ಹಮೀದ್

 

ಮಂಗಳೂರು: ವಿಟ್ಲ ಸಮೀಪದ ಕನ್ಯಾನದ ಹುಡುಗಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಸಮಗ್ರ ತನಿಖೆ ನಡೆಸಿ ಪ್ರಕರಣದ ಸತ್ಯಾಸತ್ಯತೆಯನ್ನು ಬಯಲಿಗೆಳೆಯಬೇಕೆಂದು ಎಸ್‌ಡಿಪಿಐ ಬಂಟ್ವಾಳ ವಿದಾನಸಬಾ ಕ್ಷೇತ್ರಾಧ್ಯಕ್ಷರಾದ ಶಾಹುಲ್ ಹಮೀದ್ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

ಜಿಲ್ಲೆಯಲ್ಲಿ ನೂರಾರು ಹಿಂದೂ ಹುಡುಗಿಯರು ಪ್ರೇಮ ವೈಫಲ್ಯದಿಂದ ಆತ್ಮಹತ್ಯೆ ಮಾಡಿಕೊಂಡ ಅನೇಕ ಪ್ರಕರಣಗಳಿವೆ,ಅಲ್ಲಿಗೆ ಭೇಟಿ ಕೊಡದ ಹಾಗೂ ನ್ಯಾಯಕ್ಕಾಗಿ ಆಗ್ರಹಿಸದ ಶರಣ್ ಪಂಪ್ವೆಲ್ ವಿಟ್ಲದ ಹುಡುಗಿಯ ಆತ್ಮಹತ್ಯೆ ಪ್ರಕರಣದಲ್ಲಿ ಮುಸ್ಲಿಂ ಯುವಕನ ಮೇಲೆ ಆರೋಪ ಬಂದ ಕೂಡಲೇ ಭೇಟಿ ಕೊಟ್ಟು ಪತ್ರಿಕಾಗೋಷ್ಠಿ ನಡೆಸಿ ಕಪೋಲಕಲ್ಪಿತ ಲವ್ ಜಿಹಾದ್ ಎಂದು ಆರೋಪ ಮಾಡವುದರ ಹಿಂದೆ ಮುಸ್ಲಿಮರ ವಿರುದ್ಧ ಇರುವ ದ್ವೇಷವೇ ಹೊರತು ಸಂತ್ರಸ್ತ ಹಿಂದು ಕುಟುಂಬದವರೊಂದಿಗೆ ಇರುವ ಪ್ರೀತಿಯಲ್ಲ ಎಂದವರು ಹೇಳಿದ್ದು, ಪ್ರಕರಣವನ್ನು ನೆಪವಾಗಿಟ್ಟುಕೊಂಡು ಜಿಲ್ಲೆಯ ಶಾಂತಿ ಕದಡಲು ಯತ್ನಿಸುತ್ತಿರುವ ಸಂಘಪರಿವಾರ ನಾಯಕರ ಮೇಲೆ ನಿಗಾ ಇರಿಸಬೇಕು ಮತ್ತು ಆತ್ಮಹತ್ಯೆ ಪ್ರಕರಣವನ್ನು ಕೂಲಂಕುಷವಾಗಿ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಎಸ್‌ಡಿಪಿಐ ಬಂಟ್ವಾಳ ಕ್ಷೇತ್ರಾಧ್ಯಕ್ಷ ಶಾಹುಲ್ ಹಮೀದ್ ಪತ್ರಿಕಾ  ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ

Ads on article

Advertise in articles 1

ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ

Advertise under the article

ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ