Election: ರಾಷ್ಟ್ರಪತಿ ಚುನಾವಣೆ ಘೋಷಣೆ - ಜುಲೈ 18ರಂದು ಮತದಾನ

Election: ರಾಷ್ಟ್ರಪತಿ ಚುನಾವಣೆ ಘೋಷಣೆ - ಜುಲೈ 18ರಂದು ಮತದಾನ

 

ನವದೆಹಲಿ: ಭಾರತದ ರಾಷ್ಟ್ರಪತಿ ಚುನಾವಣೆ ವೇಳಾಪಟ್ಟಿ ಪ್ರಕಟಗೊಂಡಿದೆ. ಜುಲೈ 18ಕ್ಕೆ ಚುನಾವಣೆ ನಡೆಯಲಿದೆ. ಜುಲೈ 18 ರಂದು ರಾಷ್ಟ್ರಪತಿ ಚುನಾವಣೆಗೆ ಮತದಾನ ನಡೆಯಲಿದ್ದು, ಜುಲೈ 21 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿದ್ದಾರೆ.

ಹಾಲಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವಧಿ ಜುಲೈ 24 ರಂದು ಮುಕ್ತಾಯವಾಗಲಿದೆ. 2017 ರ ಅಧ್ಯಕ್ಷೀಯ ಚುನಾವಣೆಯಲ್ಲಿ ಸುಮಾರು ಶೇ.50 ರಷ್ಟು ಮತಗಳು ಎನ್‌ಡಿಎ ಪರವಾಗಿ ಇದ್ದವು. ಒಟ್ಟು 4,880 ಮತದಾರರಲ್ಲಿ 4,109 ಶಾಸಕರು ಮತ್ತು 771 ಸಂಸದರು ಮತ ಚಲಾಯಿಸಿದ್ದರು.  2022 ರ ಅಧ್ಯಕ್ಷೀಯ ಚುನಾವಣೆಗಳಲ್ಲಿ ಒಟ್ಟು 4,809 ಮತದಾರರು ಮತ ಚಲಾಯಿಸುತ್ತಾರೆ. ರಾಜ್ಯಸಭಾ ಚುನಾವಣೆಗಳಲ್ಲಿರುವಂತೆ ಯಾವುದೇ ರಾಜಕೀಯ ಪಕ್ಷವು ತನ್ನ ಸದಸ್ಯರಿಗೆ ವಿಪ್ ಜಾರಿಗೊಳಿಸುವಂತಿಲ್ಲ.

Ads on article

Advertise in articles 1

ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ

Advertise under the article

ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ