
KARGE: ರಾಜ್ಯಸಭಾ ಚುನಾವಣೆ: ಮಹಾರಾಷ್ಟ್ರಕ್ಕೆ ವೀಕ್ಷಕರಾಗಿ ಖರ್ಗೆ
Sunday, June 5, 2022
ನವದೆಹಲಿ: ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಿಂದ ಮಹಾರಾಷ್ಟ್ರಕ್ಕೆ ವೀಕ್ಷಕರಾಗಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅಧ್ಯಕ್ಷೆ ಸೋನಿಯಾ ಗಾಂಧಿ ನೇಮಿಸಿದ್ದಾರೆ. ಜೂನ್ 10 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪಕ್ಷದ ಹಿರಿಯ ನಾಯಕರನ್ನು ವೀಕ್ಷಕರನ್ನಾಗಿಸಿದ್ದಾರೆ. ಪವನ್ ಕುಮಾರ್ ಬನ್ಸಾಲ್ ಮತ್ತು ಟಿಎಸ್ ಸಿಂಗ್ ದೇವ್ ಅವರನ್ನು ರಾಜಸ್ಥಾನಕ್ಕೆ ವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ.