MAHARASTRA: ಜುಲೈ 4ರಂದು ಏಕನಾಥ್ ಶಿಂಧೆ ವಿಶ್ವಾಸಮತ ಯಾಚನೆ
Friday, July 1, 2022
ಮಹಾರಾಷ್ಟ್ರದ ಮುಖ್ಯಮಂತ್ರಿ ಆಗಿ ಪ್ರಮಾಣವಚನ ಸ್ವೀಕರಿಸಿರುವ ಏಕನಾಥ್ ಶಿಂಧೆ ಜುಲೈ 4ರಂದು ವಿಶ್ವಾಸಮತ ಯಾಚಿಸಲಿದ್ದಾರೆ.
ನಾವು 170 ಶಾಸಕರ ಬೆಂಬಲವನ್ನು ಹೊಂದಿದ್ದು, ಈ ಸಂಖ್ಯೆಯು ಹೆಚ್ಚಾಗುವ ಸಾಧ್ಯತೆಯೂ ಇದೆ. ವಿಧಾನಸಭೆಯಲ್ಲಿ ನಾವು ಬಹುಮತ ಸಾಬೀತುಪಡಿಸುತ್ತೇವೆ ಎಂದು ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ. ವಿಧಾನಸಭಾ ಸ್ಪೀಕರ್ ಹುದ್ದೆಗೆ ಬಿಜೆಪಿ ಶಾಸಕ ರಾಹುಲ್ ನಾರ್ವೇಕರ್ ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ.ಹೀಗಾಗಿ ಸ್ಪೀಕರ್ ಚುನಾವಣೆಯೂ ನಡೆಯಲಿದೆ.