NEWS: ಕರಾವಳಿಯಾದ್ಯಂತ ಭಾರಿ ಮಳೆ, ಮುಂಜಾಗರೂಕತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ ಡಿ.ಸಿ.
Monday, July 4, 2022
ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖಾ ಮುನ್ಸೂಚನೆಯನ್ನು ಗಮನದಲ್ಲಿರಿಸಿ, ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು ಮಂಗಳವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ.
ಕರಾವಳಿಯಾದ್ಯಂತ ಮಂಗಳವಾರ ಭಾರಿ ಮಳೆಯಾಗುತ್ತಿದ್ದು, ಈಗಾಗಲೇ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕಶಾಲೆ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ, Diploma/ITI ಕಾಲೇಜುಗಳಿಗೆ ಮುಂಜಾಗ್ರತಾ ಕ್ರಮವಾಗಿ ರಜೆ ಸಾರಲಾಗಿದೆ ಎಂದವರು ಹೇಳಿದ್ದಾರೆ.