POLITICS: ಪಕ್ಷ ಇದ್ದರೆ ಮಾತ್ರ ನಾವು – ಡಿ.ಕೆ.ಶಿವಕುಮಾರ್

POLITICS: ಪಕ್ಷ ಇದ್ದರೆ ಮಾತ್ರ ನಾವು – ಡಿ.ಕೆ.ಶಿವಕುಮಾರ್

 

ನಾನು ಯಾವತ್ತೂ ಪಕ್ಷದ ವಿರುದ್ಧ ಒಂದೇ ಒಂದು ಮಾತನ್ನೂ ಆಡಿಲ್ಲ. ನನಗೆ ವ್ಯಕ್ತಿ ಮುಖ್ಯವಲ್ಲ. ಪಕ್ಷ ಮುಖ್ಯ. ಪಕ್ಷ ಇದ್ದರೆ ಮಾತ್ರ ನಾವು. ಇದನ್ನೇ ನಾನು ಮೊದಲಿಂದಲೂ ಪ್ರತಿಪಾದಿಸುತ್ತಿದ್ದೇನೆ. ಎಲ್ಲಾ ಕಾರ್ಯಕರ್ತರಿಗೂ ಇದನ್ನೇ ಹೇಳುತ್ತಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಬೆಂಗಳೂರಿನ ತನ್ನ ನಿವಾಸದಲ್ಲಿ ಮಾತನಾಡಿದ ಅವರು, ನಾನು ಮಂತ್ರಿ ಸ್ಥಾನ ಸಿಗದಿದ್ದಾಗಲೇ ಪ್ರಶ್ನಿಸಿರಲಿಲ್ಲ. ನಾವು ಸಿದ್ದರಾಮಯ್ಯ ಅವರ ಪರವಾಗಿಯೂ ಹೋರಾಟ ಮಾಡಿದೆವು. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದಿದ್ದಾಗಲೂ ಮಾತನಾಡಲಿಲ್ಲ. ನಾನು ಅವರ ನಾಯಕತ್ವದಲ್ಲಿ ಪ್ರಚಾರ ಸಮಿತಿ ಅಧ್ಯಕ್ಷನಾಗಿ ಕೆಲಸ ಮಾಡಿದ್ದೆ. ಅವರ ನಾಯಕತ್ವದಲ್ಲಿ ಚುನಾವಣೆ ನಡೆಯಬೇಕು ಎಂದು ಬೆಂಬಲಿಸಿದ್ದೆ ಎಂದರು.

Ads on article

Advertise in articles 1

ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ

Advertise under the article

ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ