NEWS: ರಾಜ್ಯದಲ್ಲಿ 21 ದಿನ ರಾಹುಲ್ ಪಾದಯಾತ್ರೆ
ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾರತ ಜೋಡೋ ಪಾದಯಾತ್ರೆ ಮೂಲಕ ದೇಶವನ್ನು ಒಗ್ಗೂಡಿಸಲು ಮುಂದಾಗಿದ್ದು, ರಾಜ್ಯದಲ್ಲಿ ಅವರು 21 ದಿನಗಳ ಕಾಲ ಪಾದಯಾತ್ರೆ ಮಾಡಲಿದ್ದಾರೆ. ಒಂದೊಂದು ಜಿಲ್ಲೆಗೆ ಒಂದೊಂದು ದಿನ ನಿಗದಿ ಮಾಡಲಿದ್ದು, ಆ ಜಿಲ್ಲೆಯವರು ರಾಹುಲ್ ಗಾಂಧಿ ಅವರ ಜೊತೆ ಹೆಜ್ಜೆ ಹಾಕಬೇಕು ಎಂದು ರಾಜ್ಯ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಸೆ.7ರಂದು ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಭಾರತ ಜೋಡೊ ವಿಶೇಷ ಪಾದಯಾತ್ರೆ ನಡೆಯಲಿದೆ. ರಾಜ್ಯದಲ್ಲಿ ರಾಹುಲ್ 545 ಕಿ.ಮೀ. ಪಾದಯಾತ್ರೆ ನಡೆಸಲಿದ್ದಾರೆ ಎಂದವರು ಚಳ್ಳಕೆರೆಯಲ್ಲಿ ನಡೆದ ಕಾಂಗ್ರೆಸ್ ಬಹಿರಂಗ ಸಭೆಯಲ್ಲಿ ತಿಳಿಸಿದ್ದಾರೆ.
ಬಿಜೆಪಿ ದೇಶವನ್ನು ಇಬ್ಭಾಗ ಮಾಡುತ್ತಿದೆ, ರಾಹುಲ್ ಗಾಂಧಿ ಅವರು ಭಾರತ್ ಜೋಡೋ ಪಾದಯಾತ್ರೆಯ ಮೂಲಕ ದೇಶವನ್ನು ಒಗ್ಗೂಡಿಸಲು ಮುಂದಾಗಿದ್ದಾರೆ.
— Karnataka Congress (@INCKarnataka) August 20, 2022
ಅವರು ರಾಜ್ಯದಲ್ಲಿ 21 ದಿನಗಳ ಪಾದಯಾತ್ರೆ ಮಾಡಲಿದ್ದಾರೆ.
ಒಂದೊಂದು ಜಿಲ್ಲೆಗೆ ಒಂದೊಂದು ದಿನ ನಿಗದಿ ಮಾಡಲಿದ್ದು, ಆ ಜಿಲ್ಲೆಯವರು ರಾಹುಲ್ ಗಾಂಧಿ ಅವರ ಜೊತೆ ಹೆಜ್ಜೆ ಹಾಕಬೇಕು.
- @DKShivakumar pic.twitter.com/VblcaxSPBM