NEWS: ಮೊಟ್ಟೆ ಎಸೆದಾತ ಯಾವ ಪಕ್ಷ: ಕಾಂಗ್ರೆಸ್ - ಬಿಜೆಪಿ ಟ್ವೀಟ್ ವಾರ್!!

NEWS: ಮೊಟ್ಟೆ ಎಸೆದಾತ ಯಾವ ಪಕ್ಷ: ಕಾಂಗ್ರೆಸ್ - ಬಿಜೆಪಿ ಟ್ವೀಟ್ ವಾರ್!!

 


ಸಿದ್ಧರಾಮಯ್ಯ ಕಾರಿಗೆ ಮೊಟ್ಟೆ ಎಸೆದಾತ ಯಾರು ಎಂಬುದು ಗೊತ್ತಾಗಿದೆ, ಆದರೆ ಆತ ಯಾವ ಪಕ್ಷ ಎಂಬ ಕುರಿತು ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ವಾರ್ ಶುರುವಾಗಿದೆ.

 ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಸಂಪತ್ ಕಾಂಗ್ರೆಸ್ ಕಾರ್ಯಕರ್ತ ಎಂಬ ಬಿಜೆಪಿ ಆರೋಪಕ್ಕೆ ಕಾಂಗ್ರೆಸ್ ಫೋಟೋ ಸಹಿತ ಟ್ವೀಟ್ ಮಾಡಿದೆ. ಬಿಜೆಪಿ ಮತ್ತು ಆರ್ ಎಸ್ಎಸ್ ತನ್ನ ಅಜೆಂಡಾ ಸ್ಥಾಪಿಸಲು ತಮ್ಮಲ್ಲಿನ ಮುಗ್ದ ಕಾರ್ಯಕರ್ತರಿಗೆ ಯಾವ ವೇಷವನ್ನು ಬೇಕಿದ್ದರೂ ಹಾಕಿ ಕಳಿಸುತ್ತವೆ, ಯಾವ ಕೃತ್ಯಗಳನ್ನು ಬೇಕಿದ್ದರೂ ಮಾಡಿಸುತ್ತವೆ, ಅವರನ್ನೇ ಕೊಂದು ಚಿತೆಯಲ್ಲಿ ಚಳಿ ಕಾಯಿಸಿಕೊಳ್ಳುತ್ತವೆ ಎಂದು ತಿರುಗೇಟು ನೀಡಿದೆ.

ಆರ್ ಎಸ್ಎಸ್ ‘ಪ್ಯಾಂಟುತೊಟ್ಟವನಿಗೆ ಕಾಂಗ್ರೆಸ್ ವೇಷ ತೋಡಿಸಿದ ಮಾತ್ರಕ್ಕೆ ಕಾಗೆ ನವಿಲಾಗುತ್ತದೆಯೇ? ಎಂದು ಕರ್ನಾಟಕ ಕಾಂಗ್ರೆಸ್ ಬಿಜೆಪಿಗೆ  ಪ್ರಶ್ನಿಸಿದೆ ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ತಾನು ಕಾಂಗ್ರೆಸ್ ಕಾರ್ಯಕರ್ತ ಎಂದು ಹೇಳಿದ್ದ ಸಂಪತ್ ಆರ್ ಎಸ್ ಎಸ್ ಸಮವಸ್ತ್ರ ಧರಿಸಿರುವ ಪೋಟೋ ಹಂಚಿಕಿೊಂಡಿದೆ.

ಕಾರಿಗೆ ಮೊಟ್ಟೆ ಎಸೆದವರು ಕಾಂಗ್ರೆಸ್‌ನವರು ಎಂಬ ಕಟ್ಟುಕತೆ ಸೃಷ್ಟಿಸುವ ಮುನ್ನ ಉತ್ತರಿಸಿ. ಈ ವ್ಯಕ್ತಿಯೊಂದಿಗೆ ಅಪ್ಪಚ್ಚು ರಂಜನ್ ಅವರಿಗೆ ಏನು ಕೆಲಸ? ಸ್ಥಳೀಯ ಕಾಂಗ್ರೆಸ್ ಮುಖಂಡರಿಗೇ ಪರಿಚಯವಿಲ್ಲದ ಆತ ಕಾಂಗ್ರೆಸ್ ಕಾರ್ಯಕರ್ತನಾಗುವುದು ಹೇಗೆ? ಎಂದು ಪ್ರಶ್ನಿಸಿದೆ. ಮೊಟ್ಟೆ ಎಸೆದಿದ್ದು ಕಾಂಗ್ರೆಸ್ ಕಾರ್ಯಕರ್ತ ಎಂಬ ಕಾಗಕ್ಕ ಗುಬ್ಬಕ್ಕನ ಕತೆ ಕಟ್ಟಿರುವ ಬಿಜೆಪಿ ಉತ್ತರಿಸಬೇಕು. ಅವರು ಕಾಂಗ್ರೆಸ್ ಕಾರ್ಯಕರ್ತರೇ ಆಗಿದ್ದರೆ ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ಠಾಣೆಯಿಂದ ಜಾಮೀನು ಕೊಟ್ಟು ಕರೆತಂದಿದ್ದೇಕೆ? ಕಾಂಗ್ರೆಸ್ ಕಾರ್ಯಕರ್ತನಾಗಿದ್ದರೆ ಆತ ಅಪ್ಪಚ್ಚು ರಂಜನ್‌ಗೇಕೆ ಆಪ್ತನಾಗಿದ್ದಾನೆ ಎಂದು ಪ್ರಶ್ನಿಸಿದೆ.

 ಕಾಂಗ್ರೆಸ್ ಪಕ್ಷ ಈಗ ಅಕ್ಷರಶಃ ಬಾಣಲೆಯಿಂದ ಬೆಂಕಿಗೆ ಬಿದ್ದಿದೆ!

ಕಾಂಗ್ರೆಸ್ ಕಾರ್ಯಕರ್ತರೇ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹಿಂದೂ ವಿರೋಧಿ ಹೇಳಿಕೆಗಳ ವಿರುದ್ಧ ಸಿಡಿದೆದ್ದಿದ್ದಾರೆ.

ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದಿದ್ದು ನಾನೇ ಎಂದು ಸ್ವತಃ ಕಾಂಗ್ರೆಸ್ ಕಾರ್ಯಕರ್ತನೇ ಹೇಳಿಕೊಂಡಿದ್ದಾನೆ.#ಹಿಂದೂವಿರೋಧಿಸಿದ್ದರಾಮಯ್ಯ pic.twitter.com/SSn9pdRa9o

Ads on article

Advertise in articles 1

ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ

Advertise under the article

ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ