CRIME: ಮಗಳ ಅತ್ಯಾಚಾರ ಮಾಡಿದ ತಂದೆಗೆ 15 ವರ್ಷಗಳ ಕಠಿಣ ಶಿಕ್ಷೆ
ಮಗಳ ಮೇಲೆ ಅತ್ಯಾಚಾರ ಮಾಡಿದ ಆರೋಪಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕುಕ್ಕಾಜೆ ನಿವಾಸಿ ದಾವೂದ್ ಎಂಬಾತನಿಗೆ 15 ವರ್ಷಗಳ ಕಠಿಣ ಕಾರಾವಾಸ ಮತ್ತು 25 ಸಾವಿರ ರೂ ಜುಲ್ಮಾನೆ ವಿಧಿಸಿ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ (ಶೀಘ್ರಪಥ -2) ನ್ಯಾಯಾಲಯ ತೀರ್ಪು ನೀಡಿದೆ.
ನ್ಯಾಯಾಧೀಶರಾದ ಕೆ. ಎಮ್. ರಾಧಾಕೃಷ್ಣ ಅರೋಪಿತನಿಗೆ 15 ವರ್ಷಗಳ ಕಠಿಣ ಕಾರಾವಾಸ ಹಾಗೂ ರೂ. 25 ಸಾವಿರ ರೂ ಜುಲ್ಮಾನೆ ಶಿಕ್ಷೆ ಯ ತೀರ್ಪುನ್ನು ಗುರುವಾರ ಅದೇಶಿಸಿರುತ್ತಾರೆ.
2018 ರ ಜನೆವರಿ ತಿಂಗಳಿನಲ್ಲಿ ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿ ಅಂದಿನ ಪೊಲೀಸ್ ವೃತ್ತ ನಿರೀಕ್ಷಕರಾದ ಶರಣಗೌಡ ಹಾಗೂ ಟಿ. ಡಿ. ನಾಗರಾಜ್ ತನಿಖೆ ನಡೆಸಿ ಆರೋಪಿಯಾದ ಮಂಚಿ ಗ್ರಾಮದ ಕುಕ್ಕಾಜೆ ನಿವಾಸಿ ದಾವೂದ್ (55) ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.
ಪ್ರಕರಣದ ಕೂಲಂಕುಷ ತನಿಖೆಯನ್ನು ದ.ಕ. ಜಿಲ್ಲಾ ಪೊಲೀಸ್ ಅಧೀಕ್ಷಕರು ಮತ್ತು ಹೆಚ್ಚುವರಿ ಅಧೀಕ್ಷಕರ ಮಾರ್ಗದರ್ಶನದಂತೆ ಪೊಲೀಸ್ ವೃತ್ತ ನಿರೀಕ್ಷಕರಾದ ಶರಣಗೌಡ ಮತ್ತು ಟಿ. ಡಿ. ನಾಗರಾಜ್ ನಡೆಸಿದ್ದು, ನ್ಯಾಯಾಲಯದ ವಿಚಾರಣೆಯಲ್ಲಿ ಸರ್ಕಾರಿ ಅಭಿಯೋಜಕರಾದ ವೆಂಕಟರಮಣ ಸ್ವಾಮಿ ವಾದ ಮಂಡಿಸಿದ್ದರು. ಬಂಟ್ವಾಳ ಗ್ರಾಮಾಂತರ ಠಾಣಾ ಕೋರ್ಟ್ ಮಾನಿಟರಿಂಗ್ ಸೆಲ್ ನ ಪಿ.ಎಸ್.ಐ ಹರೀಶ್ ಮತ್ತು ಸಿಬ್ಬಂದಿ ಸಾಕ್ಷಿಗಳನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.