BANGALOORU: ಕುಸಿದ ಮೆಟ್ರೊ ಪಿಲ್ಲರ್ ನಡಿ ಜೀವ ಕಳೆದುಕೊಂಡ ತಾಯಿ ಮಗು
ಕಾಮಗಾರಿ ನಡೆಯುತ್ತಿದ್ದರೆ ಕೆಳಗಿನ ರಸ್ತೆಯಲ್ಲಿ ದೊಡ್ಡ ಪ್ರಮಾಣದಲ್ಲಿ ವಾಹನ ಸಂಚಾರ ಇರುತ್ತದೆ. ಆದರೆ, ಮೆಟ್ರೋ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸದಿರುವುದು ಇಬ್ಬರ ಜೀವಕ್ಕೆ ಕುತ್ತು ತಂದಿದೆ. ಮುಂದೆ ಹೀಗೆ ಅಗದಂತೆ ಅಧಿಕಾರಿಗಳು ಹಾಗೂ ರಾಜ್ಯ ಸರಕಾರ ಎಚ್ಚರಿಕೆ ವಹಿಸಬೇಕು.2/3
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 10, 2023
ಬೆಂಗಳೂರಿನ ನಾಗವಾರದ ಬಳಿ ಮೆಟ್ರೋ ಪಿಲ್ಲರ್ ಕುಸಿದು ಇಬ್ಬರು ಸಾವೀಗಿಡಾಗಿದ್ದು ಅತ್ಯಂತ ದುರದೃಷ್ಟಕರ ಸಂಗತಿಯಾಗಿದೆ. ಈ ಸಂಬಂಧ ಸಮಗ್ರ ತನಿಖೆ ನಡೆಸಲು ಆದೇಶಿಸಿದ್ದೇನೆ. ಮೃತರ ಕುಟುಂಬಕ್ಕೆ ಮೆಟ್ರೋ ಸಂಸ್ಥೆ ನೀಡುವ ಪರಿಹಾರದ ಜೊತೆ, ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಸಹ ಪರಿಹಾರ ನೀಡಲಾಗುವುದು. pic.twitter.com/l5msYveG8u
— Basavaraj S Bommai (@BSBommai) January 10, 2023
ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಉರುಳಿ ತಾಯಿ ಮತ್ತು ಮಗ ಸಾವಿಗೀಡಾದ ಘಟನೆ ಮಂಗಳವಾರ ಬೆಳಗ್ಗೆ ನಡೆದಿದ್ದು, ನಿರ್ಮಾಣ ಹಂತದ ಕಾಮಗಾರಿ ಸಂದರ್ಭ ನಡೆಯುತ್ತಿರುವ ಮತ್ತೊಂದು ಘಟನೆ ಇದು.
ಇಂದು ಬೆಳಗ್ಗೆ ಮೆಟ್ರೋ ಪಿಲ್ಲರ್ ಕುಸಿದು ಬೈಕ್ನಲ್ಲಿ ಹೋಗುತ್ತಿದ್ದ ದಂಪತಿ ಮತ್ತು ಅವರ ಇಬ್ಬರು ಪುಟ್ಟ ಮಕ್ಕಳು ಗಾಯಗೊಂಡಿದ್ದರು. ತಕ್ಷಣ ಇವರನ್ನು ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ಬಳಿಕ ತಾಯಿ ಮತ್ತು ಒಂದು ಮೃತಪಟ್ಟಿದ್ದಾರೆ
ಬೆಂಗಳೂರಿನ ನಾಗವಾರ ಪ್ರದೇಶದಲ್ಲಿ ಇಂದು ಬೆಳಗ್ಗೆ ನಿರ್ಮಾಣ ಹಂತದ ಮೆಟ್ರೋ ಕುಸಿದು ಒಂದೇ ಕುಟುಂಬದ ನಾಲ್ವರು ಗಾಯಗೊಂಡಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಾಯಿ ತೇಜಸ್ವಿನಿ ಹಾಗೂ ಎರಡೂವರೆ ವರ್ಷದ ಮಗ ವಿಹಾನ್ ಮೃತಪಟ್ಟಿದ್ದಾರೆ. ಮಗುವಿನ ತಂದೆ ಗಾಯಗೊಂಡಿದ್ದಾರೆ. ಹೆಣ್ಣು ಮಗು ಮತ್ತು ತಂದೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸಿಲ್ಕ್ ಬೋರ್ಡ್ನಿಂದ ಏರ್ಪೋರ್ಟ್ ವರೆಗಿನ ನಿರ್ಮಾಣ ಹಂತದ ಮೆಟ್ರೋ ಮಾರ್ಗದಲ್ಲಿ ಮೆಟ್ರೋ ಪಿಲ್ಲರ್ ನಿರ್ಮಾಣಕ್ಕೆ ಕಬ್ಬಿಣದ ರಾಡ್ಗಳನ್ನು ನಿಲ್ಲಿಸಲಾಗಿತ್ತು. ಈ ಪಿಲ್ಲರ್ ರಾಡ್ಗಳು ಕುಸಿದ ಸಮಯದಲ್ಲಿ ಕೆಆರ್ ಪುರಂನಿಂದ ಹೆಬ್ಬಾಳಕ್ಕೆ ದಂಪತಿಗಳು ತಮ್ಮ ಇಬ್ಬರು ಪುಟ್ಟ ಮಕ್ಕಳ ಜತೆ ಬೈಕ್ನಲ್ಲಿ ಹೋಗುತ್ತಿದ್ದರು. ಈ ಕುಟುಂಬದ ಮೇಲೆ ಪಿಲ್ಲರ್ ರಾಡ್ಗಳು ಬಿದ್ದು ದುರ್ಘಟನೆ ಸಂಭವಿಸಿದೆ.
ಬೊಮ್ಮಾಯಿ ಹೇಳಿಕೆ:
ಬೆಂಗಳೂರಿನ ನಾಗವಾರದಲ್ಲಿ ಮೆಟ್ರೋ ಕಾಮಗಾರಿಯ ವೇಳೆ ಪಿಲ್ಲರ್ ಕುಸಿತದ ಅವಘಡದಿಂದಾಗಿ ಮಹಿಳೆ ಹಾಗೂ ಮಗುವಿನ ಸಾವಾಗಿದ್ದು, ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ತಲಾ ೧೦ ಲಕ್ಷ ಪರಿಹಾರವನ್ನು ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ
ಕಿಡಿ ಕಾರಿದ ವಿಪಕ್ಷ:
ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನಾಯಕ ಹೆಚ್ಡಿ ಕುಮಾರಸ್ವಾಮಿ, ಇದು ರಾಜ್ಯ ಸರ್ಕಾರದ ನಿರ್ಲಕ್ಷ್ಯಕ್ಕೆ ಹಿಡಿದ ಕನ್ನಡಿ ಎಂದು ಕಿಡಿಕಾರಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ೪೦ ಪರ್ಸೆಂಟ್ ಕಮಿಷನ್’ ಸರ್ಕಾರದಿಂದ ಇನ್ನೇನು ನಿರೀಕ್ಷೆ ಮಾಡಲು ಸಾಧ್ಯ ಎಂದು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.