NEWS: ಮತದಾರರ ಸೆಳೆಯಲು ಬಾಡೂಟ: ಬೆಳಗಾವಿಯಲ್ಲಿ ಕೇಸು ದಾಖಲು

NEWS: ಮತದಾರರ ಸೆಳೆಯಲು ಬಾಡೂಟ: ಬೆಳಗಾವಿಯಲ್ಲಿ ಕೇಸು ದಾಖಲು

 

 

 ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮತದಾರರನ್ನು ಸೆಳೆಯುವ ಉದ್ದೇಶದಿಂದ ಚುನಾವಣಾ ಆಕಾಂಕ್ಷಿ ಅಭ್ಯರ್ಥಿಗಳು ಮಾ.15 ರಂದು ರಾತ್ರಿ ಬೆಳಗಾವಿ ತಾಲೂಕಿನ ಸಂತಿಬಸ್ತವಾಡ ಗ್ರಾಮದಲ್ಲಿ 3000 ಜನರನ್ನು ಸೇರಿಸಿ ಕಾರ್ಯಕ್ರಮ ಆಯೋಜಿಸಿದ್ದರು

ಕಾರ್ಯಕ್ರಮಕ್ಕೆ ಬಂದವರಿಗಾಗಿ ಬಾಡೂಟ (ಮಾಂಸದ ಊಟ) ವ್ಯವಸ್ಥೆ ಕೂಡ ಮಾಡಲಾಗಿತ್ತು. ಹಿಂದೆಯೇ ಆಕಾಂಕ್ಷಿ ಅಭ್ಯರ್ಥಿಗಳು ಮತ್ತು ರಾಜಕೀಯ ಮುಖಂಡರಿಗೆ ಚುನಾವಣಾ ನೀತಿ, ನಿಯಮಗಳ ಮಾಹಿತಿ ನೀಡಿದ್ದರೂ ನಿಯಮ ಉಲ್ಲಂಘಿಸಿದ ಹಿನ್ನಲೆಯಲ್ಲಿ ಬಾಡೂಟ ಸ್ಥಳದ ಮೇಲೆ ದಾಳಿ ನಡೆಸಿದ ಚುನಾವಣಾ ಫ್ಲೈಯಿಂಗ್ ಸ್ಕ್ವಾಡ್ ಕಾರ್ಯಕ್ರಮ ಆಯೋಜಿಸಿದ್ದ ನಾಗೇಂದ್ರ ನಾಯಿಕ್, ನಾಗೇಶ್ ಮನ್ನೋಳಕರ ವಿರುದ್ಧ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Ads on article

Advertise in articles 1

ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ

Advertise under the article

ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ