TOLL: ಟೋಲ್ ಗೇಟ್, ಕಂದಾಯ ಇಲಾಖೆ ಕಾರ್ಯವೈಖರಿ ವಿರುದ್ಧ ಕಿಡಿಕಾರಿದ ಎಸ್.ಡಿ.ಪಿ.ಐ.

TOLL: ಟೋಲ್ ಗೇಟ್, ಕಂದಾಯ ಇಲಾಖೆ ಕಾರ್ಯವೈಖರಿ ವಿರುದ್ಧ ಕಿಡಿಕಾರಿದ ಎಸ್.ಡಿ.ಪಿ.ಐ.

 

ಬ್ರಹ್ಮರಕೂಟ್ಲುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಟೋಲ್ ಸಂಗ್ರಹದ ವ್ಯವಸ್ಥೆ ಹಾಗೂ ಬಂಟ್ವಾಳ ಕಂದಾಯ ಇಲಾಖೆಯ ಕಾರ್ಯವೈಖರಿ ವಿರುದ್ಧ ಎಸ್.ಡಿ.ಪಿ.ಐ. ಕಿಡಿಕಾರಿದೆ. ಈ ಕುರಿತು ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಂಟ್ವಾಳ ಕ್ಷೇತ್ರದ ಅಭ್ಯರ್ಥಿ ಇಲ್ಯಾಸ್ ಮಹಮ್ಮದ್ ತುಂಬೆ, ಈ ಕುರಿತು ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದಿದ್ದಾರೆ.

ತಾಲೂಕು ಕಚೇರಿಯಲ್ಲಿ ಬ್ರೋಕರುಗಳ ಹಾವಳಿ ಜಾಸ್ತಿಯಾಗಿದ್ದು, ಅಕ್ರಮ ಸಕ್ರಮ ಫೈಲುಗಳ ಸಹಿತ ಯಾವುದೇ ಸರಿಯಾದ ಕಡತಗಳು ಮುಂದೆ ಹೋಗಬೇಕಿದ್ದರೂ ಪ್ರಯಾಸಪಡುವ ಸ್ಥಿತಿ ಇದೆ ಎಂದರು.

ಈ ಬಾರಿ ಎಸ್.ಡಿ.ಪಿ.ಐ. ಚುನಾವಣಾ ಕಣದಲ್ಲಿ ಸ್ಪರ್ಧೆಗಿಳಿಯುವುದು ಖಚಿತ ಎಂದು ಸ್ಪಷ್ಟಪಡಿಸಿದ ಅವರು, ಯಾವುದೇ ಕಾರಣಕ್ಕೂ ಸ್ಪರ್ಧೆಯಿಂದ ಹಿಂದಕ್ಕೆ ಸರಿಯುವುದಿಲ್ಲ ಎಂದರು. ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ಮೊನೀಶ್ ಆಲಿ, ಶರೀಫ್ ವಳವೂರು, ಚುನಾವಣಾ ಪ್ರಭಾರಿ ಶಾಹುಲ್ ಹಮೀದ್ ಉಪಸ್ಥಿತರಿದ್ದರು.

Ads on article

Advertise in articles 1

ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ

Advertise under the article

ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ