KARNATAKA CM: ಸಿದ್ದರಾಮಯ್ಯ 2.0 ಸರಕಾರಕ್ಕೆ ದಿನಗಣನೆ: ಕಾಂಗ್ರೆಸ್ ಶಾಸಕಾಂಗ ಸಭೆ ಮುಕ್ತಾಯ
Thursday, May 18, 2023
ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಎರಡನೇ ಬಾರಿ ಮುಖ್ಯಮಂತ್ರಿ ಆಗುವುದು ಖಾತ್ರಿ ಆಗುತ್ತಿದ್ದಂತೆ ಬೆಂಗಳೂರಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾಧ ಸದಸ್ಯರು ಸಭೆಯಲ್ಲಿ ಭಾಗವಹಿಸಿ, ಅಧಿಕೃತವಾಗಿ ಸಿದ್ಧರಾಮಯ್ಯ ಅವರನ್ನು ಸಿಎಂ ಎಂದು ಘೋಷಿಸಲಾಯಿತು.
2013ರಿಂದ 2018ರವರೆಗೆ ಕಾಂಗ್ರೆಸ್ ಸರಕಾರವಿದ್ದ ಸಂದರ್ಭ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಹಲವು ಯೋಜನೆಗಳ ಮೂಲಕ ಗಮನ ಸೆಳೆದಿದ್ದರು.
ಬೆಂಗಳೂರಿನ ಕ್ವೀನ್ಸ್ ರಸ್ತೆಯ ಭಾರತ್ ಜೋಡೋ ಭವನದಲ್ಲಿ ಗುರುವಾರ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ವೀಕ್ಷಕರಾದ ಸುಶೀಲ್ ಕುಮಾರ್ ಶಿಂದೆ, ಜೀತೇಂದ್ರ ಸಿಂಗ್, ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕ, ನಿಯೋಜಿತ ಸಿಎಂ ಸಿದ್ದರಾಮಯ್ಯ, ನಿಯೋಜಿತ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ನಾಯಕ ಬಿ ಕೆ ಹರಿಪ್ರಸಾದ್ ಮತ್ತಿತರರು ಭಾಗವಹಿಸಿದ್ದರು.