PUTTUR CASE: ಪೊಲೀಸ್ ದೌರ್ಜನ್ಯ ಆರೋಪ: ಎಸ್.ಐ. ಸೇರಿ ಇಬ್ಬರ ಅಮಾನತು - ಎಸ್ಪಿ

PUTTUR CASE: ಪೊಲೀಸ್ ದೌರ್ಜನ್ಯ ಆರೋಪ: ಎಸ್.ಐ. ಸೇರಿ ಇಬ್ಬರ ಅಮಾನತು - ಎಸ್ಪಿ

 

ದ.ಕ. ಜಿಲ್ಲೆಯ ಪುತ್ತೂರು ನಗರಸಭೆ ವ್ಯಾಪ್ತಿಯ ಪುತ್ತೂರು ಅರಣ್ಯ ಇಲಾಖೆಯ ಆವರಣ ಗೋಡೆಯ ಬಳಿ ಬಿಜೆಪಿ ಮುಖಂಡರಾದ ಡಿ. ವಿ. ಸದಾನಂದ ಗೌಡ ಹಾಗೂ ನಳಿನ್ ಕುಮಾರ್ ಕಟೀಲ್ ಅವರ ಭಾವಚಿತ್ರವನ್ನು ಹಾಕಿ ಬಿಜಿಪಿ ಸೋಲಿಗೆ ಕಾರಣವಾದ ನಾಯಕರಿಗೆ ಶ್ರದ್ಧಾಂಜಲಿಯ ಬ್ಯಾನರ್ ಅನ್ನು ಅಳವಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಿಗೆ ಪೊಲೀಸರು ಚಿತ್ರಹಿಂಸೆ ನೀಡಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿ, ಇಬ್ಬರನ್ನು ಅಮಾನತು ಮಾಡಲಾಗಿದೆ. ಅಲ್ಲದೆ, ಡಿವೈಎಸ್ಪಿ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲು ವರದಿ ಸಲ್ಲಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಆಮ್ಟೆ ತಿಳಿಸಿದ್ದಾರೆ.

ಪುತ್ತೂರಿಗೆ ಆಗಮಿಸಿದ ಅವರು ಗಾಯಾಳುಗಳ ಹೇಳಿಕೆ ಮತ್ತು ದೂರಿಗೆ ಸಂಬಂಧಿಸಿದಂತೆ ಸಮಗ್ರ ವಿಚಾರಣೆಯನ್ನು ನಡೆಸಿದ ಬಳಿಕ ಸುದ್ದಿಗಾರರಿಗೆ ಈ ವಿಚಾರ ತಿಳಿಸಿದರು.

ಬ್ಯಾನರಿಗೆ ಚಪ್ಪಲಿ ಹಾರ ಹಾಕಿದ್ದ ಪ್ರಕರಣದಲ್ಲಿ ಪುತ್ತೂರು ನಗರ ಠಾಣೆ ಯಲ್ಲಿ  ವಿಚಾರಣೆಗೆ ಒಳಪಡಿಸಿದ ಆರೋಪಿತರಿಗೆ ಪೊಲೀಸ್  ಹಲ್ಲೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ದೂರುದಾರ ಅವಿನಾಶ್ ನರಿಮೋಗ್ರು ರವರು ನೀಡಿದ ದೂರಿನ ಮೇರೆಗೆ ಪುತ್ತೂರು ಡಿಎಸ್ಪಿ, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆ ಪಿ.ಎಸ್.ಐ, ಪುತ್ತೂರು ಗ್ರಾಮಾಂತರ ಠಾಣೆಯ ಪಿಸಿ ಹರ್ಷಿತ್ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಕರಣ ದ ತನಿಖೆಯನ್ನು ಬಂಟ್ವಾಳ ಡಿವೈಎಸ್ಪಿ ಅವರಿಗೆ ವಹಿಸಲಾಗಿದೆ. ಹೆಚ್ಚುವರಿ ಪೊಲೀಸ್ ಅಧೀಕ್ಷಕರ ವಿಚಾರಣೆ ವರದಿ ಆಧಾರದ ಮೇಲೆ ಪಿಎಸ್.ಐ ಪುತ್ತೂರು ಗ್ರಾಮಾಂತರ ಠಾಣೆ ಹಾಗೂ ಪಿಸಿ ಹರ್ಷಿತ್ ಅವರುಗಳನ್ನು ಸೇವೆಯಿಂದ ಅಮಾನತ್ತುಗೊಳಿಸಲಾಗಿದೆ,  ಹಾಗೂ ಡಿಎಸ್ಪಿ ಪುತ್ತೂರು ರವರ ವಿರುದ್ಧ ಸೂಕ್ತ ಇಲಾಖಾ ಶಿಸ್ತು ಕ್ರಮ ಕೈಗೊಳ್ಳಲು ವರದಿಯನ್ನು ಮೇಲಾಧಿಕಾರಿಗಳಿಗೆ ಸಲ್ಲಿಸಲಾಗುವುದು ಎಂದು ವಿಕ್ರಮ್ ಆಮ್ಟೆ ಹೇಳಿದರು.

 

 

Ads on article

Advertise in articles 1

ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ

Advertise under the article

ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ