MANGALORE AIRPORT: ಪ್ರತಿಕೂಲ ಹವಾಮಾನ- ಎರಡು ವಿಮಾನಗಳು ಡೈವರ್ಟ್ ಆಗಿ ಮತ್ತೆ ಮಂಗಳೂರಿಗೆ
ಮಂಗಳೂರು: ಪ್ರತಿಕೂಲ ಹವಮಾನ
ಹಿನ್ನೆಲೆಯಲ್ಲಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯಬೇಕಾಗಿದ್ದ ಎರಡು ವಿಮಾನಗಳನ್ನು
ಡೈವರ್ಟ್ ಮಾಡಿ ಬಳಿಕ ಮತ್ತೆ ಮಂಗಳೂರಿನಲ್ಲಿ ಇಳಿಸಲಾಯಿತು.
ಪ್ರತಿಕೂಲ ಹವಾಮಾನ ಹಿನ್ನೆಲೆ ಬೆಂಗಳೂರು-ಮಂಗಳೂರು
ಮತ್ತು ಮುಂಬಯಿ - ಮಂಗಳೂರು ನಡುವಿನ ವಿಮಾನ ಸಂಚಾರ ವ್ಯತ್ಯಯವಾಗಿತ್ತು. ಬೆಂಗಳೂರಿನಿಂದ ಹೊರಟು ಮಂಗಳೂರು
ಏರ್ಪೋರ್ಟ್ ನಲ್ಲಿ ಲ್ಯಾಂಡ್ ಆಗಬೇಕಿದ್ದ ವಿಮಾನ ಕಣ್ಣೂರಿಗೆ ಡೈವರ್ಟ್ ಮಾಡಲಾಯಿತು. ಬೆಂಗಳೂರಿನಿಂದ
9.55ಕ್ಕೆ ಹೊರಟಿದ್ದ ಇಂಡಿಗೋ ವಿಮಾನ ಬೆ.11 ಗಂಟೆಗೆ ಮಂಗಳೂರು ಏರ್ಪೋರ್ಟ್ ನಲ್ಲಿ ಲ್ಯಾಂಡ್ ಆಗಬೇಕಿತ್ತು.
ಪ್ರತಿಕೂಲ ಹವಾಮಾನ ಹಿನ್ನೆಲೆ ಕೇರಳದ ಕಣ್ಣೂರು ಏರ್ಪೋರ್ಟ್ ನಲ್ಲಿ ಲ್ಯಾಂಡ್ ಮಾಡಲಾಯಿತು. ಬಳಿಕ ಹವಾಮಾನ ಬದಲಾವಣೆ ಬೆನ್ನಲ್ಲೇ ಮಂಗಳೂರು ಏರ್ಪೋರ್ಟ್
ನಲ್ಲಿ ಲ್ಯಾಂಡಿಂಗ್ ಗೆ ಅನುಮತಿ ನೀಡಲಾಯಿತು.
ಇದೇ ರೀತಿ ಮುಂಬಯಿನಿಂದ ಮಂಗಳೂರಿಗೆ ಹೊರಟಿದ್ದ ವಿಮಾನ ಹವಾಮಾನ ವೈಪರೀತ್ಯದಿಂದ
ಮಂಗಳೂರಿನಲ್ಲಿ ಇಳಿಯಲು ಸಾಧ್ಯವಾಗಲಿಲ್ಲ. ಈ ವಿಮಾನವನ್ನು ಬೆಂಗಳೂರಿಗೆ ಡೈವರ್ಟ್ ಮಾಡಲಾಯಿತು. ಬಳಿಕ
ಹವಾಮಾನ ಬದಲಾವಣೆ ಹಿನ್ನೆಲೆಯಲ್ಲಿ ಮಂಗಳೂರು ಏರ್ಪೋರ್ಟ್ ನಲ್ಲಿ ಲ್ಯಾಂಡಿಂಗ್ ಗೆ ಅವಕಾಶ ನೀಡಲಾಯಿತು.
ಹವಾಮಾನ ವೈಪರೀತ್ಯದಿಂದ ಡೈವರ್ಟ್ ಆಗಿದ್ದ
ಬೆಂಗಳೂರು - ಮಂಗಳೂರು ಮತ್ತು ಮುಂಬಯಿ- ಮಂಗಳೂರು ವಿಮಾನ ಮತ್ತೆ ಮಂಗಳೂರು ತಲುಪಿದೆ ಎಂದು ವಿಮಾನ
ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ