ARREST: ಮಂಗಳೂರು: ಚರಸ್ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ
Thursday, August 3, 2023
ಮಂಗಳೂರು: ಮಂಗಳೂರಿನ ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಮುರ ನಗರದ ಬಳಿ ವಾಹನದಲ್ಲಿ ಚರಸ್ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿ ಸುರತ್ಕಲ್ ಸೂರಿಂಜೆ ನಿವಾಸಿ ಅಬ್ದುಲ್ ಅಜೀಜ್ (34) ನನ್ನು ಪೊಲೀಸರು ಬಂಧಿಸಿದ್ದಾರೆ. ಈತನಿಂದ 7 ಲಕ್ಷ ರೂ. ಮೌಲ್ಯದ ಸೊತ್ತನ್ನು ವಶಪಡಿಸಿಕೊಳ್ಳಲಾಯಿತು.
ಬಜಪೆ ಠಾಣಾ ಪೊಲೀಸರು ಮುರನಗರದ ಬಳಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ನಂಬರ್ ಪ್ಲೇಟ್ ಇಲ್ಲದ ಕಂದು ಬಣ್ಣದ ಸ್ವಿಫ್ಟ್ ಕಾರು ಕಂಡುಬಂದಿದ್ದು, ಚಾಲಕನಿಗೆ ನಿಲ್ಲಿಸಲು ಸೂಚನೆ ನೀಡಿದ್ದಾರೆ. ಆದರೆ ಕಾರು ಚಾಲಕನು ಕಾರನ್ನು ನಿಲ್ಲಿಸದೇ ವೇಗವಾಗಿ ಚಲಾಯಿಸಿದ ಪರಿಣಾಮ, ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ನಿಂತಿದೆ. ತಕ್ಷಣ ಪೊಲೀಸರು ಕಾರಿನ ಬಳಿ ತೆರಳಿ ಓರ್ವನನ್ನು ಬಂಧಿಸಿದ್ದಾರೆ. ಈ ವೇಳೆ ಕಾರಿನಲ್ಲಿದ್ದ ಮತ್ತೊಬ್ಬ ಪರಾರಿಯಾಗಿದ್ದಾನೆ.ಬಳಿಕ ಪೊಲೀಸರು ಕಾರು ಪರಿಶೀಲನೆ ಮಾಡಿದಾಗ 250 ಗ್ರಾಂ ಮಾದಕದ್ರವ್ಯ ಚರಸ್ ಪತ್ತೆಯಾಗಿದೆ. ಓಡಿ ಹೋದ ಮತ್ತೊಬ್ಬ ಆರೋಪಿ ಮೂಡುಬಿದಿರೆಯ ತೋಡಾರು ನಿವಾಸಿ ಪೈಜಲ್ ಎಂದು ತಿಳಿದುಬಂದಿದೆ. ಪೊಲೀಸರು ಸುಮಾರು 7 ಲಕ್ಷ ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿದ್ದಾರೆ. ತಪ್ಪಿಸಿಕೊಂಡಿರುವ ಪೈಜಲ್ ಎಂಬವನ ಪತ್ತೆಯ ಬಗ್ಗೆ ಪೊಲೀಸರು ವ್ಯಾಪಕ ಕಾರ್ಯಚರಣೆ ನಡೆಸುತ್ತಿದ್ದಾರೆ. ಈ ಬಗ್ಗೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.