CYBERCRIME: ಆರೆಸ್ಸೆಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್ ಅವರ ನಕಲಿ FB ಖಾತೆ ಸೃಷ್ಟಿ: ಪೊಲೀಸರಿಗೆ ದೂರು

CYBERCRIME: ಆರೆಸ್ಸೆಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್ ಅವರ ನಕಲಿ FB ಖಾತೆ ಸೃಷ್ಟಿ: ಪೊಲೀಸರಿಗೆ ದೂರು

 

ಅರ್ ಎಸ್.ಎಸ್.ಪ್ರಮುಖ ಪ್ರಭಾವಿ ನಾಯಕ ಡಾ. ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಹೆಸರಿನಲ್ಲಿ ನಕಲಿ FACEBOOK ಖಾತೆ ತೆರದು ಆಕ್ಷೇಪಾರ್ಹ ಬರಹಗಳನ್ನು ಬರೆದು ಸಮಾಜದಲ್ಲಿ ಅಶಾಂತಿ ಹಬ್ಬಲು ಕೆಲವು ಕಿಡಿಗೇಡಿಗಳು ಪ್ರಯತ್ನಿಸುತ್ತಿದ್ದು, ಇವರ ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳುವಂತೆ ಮಂಗಳೂರು ಸೈಬರ್ ಕ್ರೈಮ್ ಪೋಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.

ಆರ್‌.ಎಸ್.ಎಸ್.ಪ್ರಮುಖರಾಗಿರುವ ಕಲ್ಲಡ್ಕ ಶ್ರೀರಾಮ‌ ವಿದ್ಯಾಕೇಂದ್ರದ ಸಂಸ್ಥಾಪಕ, ಪುತ್ತೂರು ವಿವೇಕಾನಂದ ವಿದ್ಯಾವರ್ದಕ ಸಂಘದ ಅಧ್ಯಕ್ಷರಾಗಿರುವ ಪ್ರಭಾಕರ್ ಭಟ್ ಅವರ ಹೆಸರಿನಲ್ಲಿ ನಕಲಿ ಪೇಸ್ ಬುಕ್ ಖಾತೆಯನ್ನು ತೆರೆಯಲಾಗಿದ್ದು, ಡಾ ಭಟ್ ಅವರ FACEBOOK ಖಾತೆಯಾಗಲಿ, ಅಥವ ಇನ್ನಿತರ ಯಾವುದೇ ಸಾಮಾಜಿಕ ಜಾಲತಾಣದಲ್ಲಿ ಖಾತೆಯನ್ನು ಹೊಂದಿರುವುದಿಲ್ಲ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ

ಖಾತೆಯ ಮೂಲಕ ಸಮಾಜದಲ್ಲಿ ಅಶಾಂತಿ ಹಬ್ಬಿಸುವ ಪ್ರಯತ್ನ ಮತ್ತು ಹೆಸರನ್ನು ಕೆಡಿಸುವ ಕೆಲಸ ಮಾಡಲಾಗುತ್ತಿದ್ದು ಬಗ್ಗೆ ಪೋಲೀಸರು ಸೂಕ್ತವಾದ ತನಿಖೆ ನಡೆಸುವಂತೆ ಮತ್ತು ಅವರ ಮೇಲೆ ಕಾನೂನು ಕ್ರಮವನ್ನು ಕೈಗೊಂಡು ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಪುನರಾವರ್ತನೆ ಕಂಡುಬರದಂತೆ ಪೋಲೀಸರು ನಿಗಾ ವಹಿಸುವಂತೆಯೂ ಅವರು ತಿಳಿಸಿದ್ದಾರೆ.

Ads on article

Advertise in articles 1

ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ

Advertise under the article

ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ