UDUPI CASE: ಉಡುಪಿ ಕೇಸ್: ಸಿಐಡಿಗೆ ವಹಿಸಿ ಸರ್ಕಾರ ಆದೇಶ
Monday, August 7, 2023
ಉಡುಪಿ ಖಾಸಗಿ ಕಾಲೇಜು ವಿಡಿಯೋ ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತರಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಘಟನೆ ಜುಲೈ 18 ರಂದು ನಡೆದಿದೆ ಎನ್ನಲಾಗಿದ್ದು, ಜುಲೈ 26ರಂದು ಜಿಲ್ಲಾ ಪೊಲೀಸ್ ಅಧಿಕಾರಿಗಳು ಸ್ವಯಂ ಪ್ರೇರಿತ ದೂರು ದಾಖಲಿಸಿದ್ದರು. ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ, ಪ್ರಕರಣವನ್ನು ಎಸ್ ಐ ಟಿ ಗೆ ವಹಿಸುವಂತೆ ಬಿಜೆಪಿ ಹಾಗೂ ಸಂಘಪರಿವಾರದ ನಾಯಕರು ಸರಕಾರವನ್ನು ಆಗ್ರಹಿಸಿದ್ದರು. ಈ ಕುರಿತು ಟ್ಟಿಟ್ಟರ್ ಸಂದೇಶ ಇಲ್ಲಿದೆ.
ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವೀಡಿಯೋ ಚಿತ್ರೀಕರಣ ನಡೆಸಲಾಗಿದೆ ಎಂಬ ಆರೋಪವಿದ್ದು, ಇದು ಸೂಕ್ಷ್ಮ ಪ್ರಕರಣವಾಗಿರುವುದರಿಂದ ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಸಿ.ಐ.ಡಿ ಗೆ ವಹಿಸಿ ಆದೇಶಿಸಲಾಗಿದೆ.
— CM of Karnataka (@CMofKarnataka) August 7, 2023
- ಮುಖ್ಯಮಂತ್ರಿ @siddaramaiah pic.twitter.com/3aVKquZYQ6