ACCIDENT: ಮಂಗಳೂರಿನ ಪಡೀಲ್ ಅಂಡರ್ ಪಾಸ್ ನಲ್ಲಿ ಅಪಘಾತ: ವಿದ್ಯಾರ್ಥಿ ಸಾವು, ಇಬ್ಬರು ಗಂಭೀರ
Thursday, September 14, 2023
ಮಂಗಳೂರಿನ ಹೊರವಲಯದ
ಪಡೀಲ್ ಅಂಡರ್ ಪಾಸ್ನಲ್ಲಿ ಗುರುವಾರ ಸಂಜೆ ನಡೆದ ರಸ್ತೆ ಅಫಘಾತದಲ್ಲಿ ವಿದ್ಯಾರ್ಥಿಯೊಬ್ಬ ಮೃತಪಟ್ಟು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತಪಟ್ಟ ಯುವಕನನ್ನು ಬಜಾಲ್ ಸಮೀಪದ ಪಲ್ಲಕೆರೆಯ ನಿವಾಸಿ ಭವಿನ್ ರಾಜ್ (20) ಎಂದು ಗುರುತಿಸಲಾಗಿದೆ. ಗಾಲ್ವಿನ್ (19) ಮತ್ತು ಆಶಿತ್ 17) ಎಂಬವರು ಗಂಭೀರವಾಗಿ ಗಾಯಗೊಂಡಿದ್ದು, ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಗರದ ಖಾಸಗಿ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ಕಲಿಯುತ್ತಿದ್ದ ಭವಿನ್ ರಾಜ್ ಗುರುವಾರ ಸಂಜೆ ತನ್ನ ಗೆಳೆಯರ ಜತೆ ಬೈಕ್ನಲ್ಲಿ ಸಂಚರಿಸುತ್ತಿದ್ದಾಗ ಪಡೀಲ್ ಅಂಡರ್ಪಾಸ್ ಬಳಿ ಬೈಕ್ ನಿಯಂತ್ರಣ ತಪ್ಪಿ ಅಂಡರ್ಪಾಸ್ ಫುಟ್ಪಾತ್ಗೆ ಡಿಕ್ಕಿಯಾಗಿದೆ . ಇದರಿಂದ ಮೂವರು ಕೂಡ ಗಾಯಗೊಂಡಿದ್ದು, ಈ ಪೈಕಿ ಭವಿನ್ ರಾಜ್ ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಮಂಗಳೂರು ದಕ್ಷಿಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.