MANGALORE: ಮಂಗಳೂರು ನೂತನ ಮೇಯರ್ ಆಗಿ ಸುಧೀರ್ ಶೆಟ್ಟಿ, ಉಪಮೇಯರ್ ಸುನೀತಾ

MANGALORE: ಮಂಗಳೂರು ನೂತನ ಮೇಯರ್ ಆಗಿ ಸುಧೀರ್ ಶೆಟ್ಟಿ, ಉಪಮೇಯರ್ ಸುನೀತಾ

 

ಮಂಗಳೂರು ಮಹಾನಗರ ಪಾಲಿಕೆಯ 24 ನೇ ಅವಧಿಯ ಮೇಯರ್ ಹಾಗೂ ಉಪಮೇಯರ್ ಹುದ್ದೆಗೆ ಶುಕ್ರವಾರ ಆಯ್ಕೆ ಪ್ರಕ್ರಿಯೆ ನಡೆಯಿತು. ಮೇಯರ್ ಆಗಿ ಬಿಜೆಪಿಯ ಸುಧೀರ್ ಶೆಟ್ಟಿ ಕಣ್ಣೂರು ಮತ್ತು ಉಪಮೇಯರ್ ಆಗಿ ಬಿಜೆಪಿ ಯ ಸುನಿತಾ ಆಯ್ಕೆಯಾದರು.

ಮಂಗಳೂರು ಮಹಾನಗರ ಪಾಲಿಕೆಯ  ಮಂಗಳಾ ಸಭಾಂಗಣದಲ್ಲಿ ನಡೆದ ಚುನಾವಣೆಯನ್ನು ಚುನಾವಣಾಧಿಕಾರಿ ಡಾ ಜಿ ಸಿ ಪ್ರಕಾಶ್  ನಡೆಸಿಕೊಟ್ಟರು.. 

ಈ ಅವಧಿಯ 4ನೇ ಮೇಯ‌ರ್  ಹುದ್ದೆ ಸಾಮಾನ್ಯ ವರ್ಗಕ್ಕೆ ಹಾಗೂ ಉಪಮೇಯರ್ ಹುದ್ದೆ ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಾಗಿತ್ತು.ಪಾಲಿಕೆಯ ಒಟ್ಟು 60 ಸ್ಥಾನಗಳಲ್ಲಿ ಬಿಜೆಪಿ 44,ಕಾಂಗ್ರೆಸ್ 14 ಹಾಗೂ ಇಬ್ಬರು ಎಸ್‌ಡಿಪಿಐ ಸದಸ್ಯರು ಇದ್ದಾರೆ.

Ads on article

Advertise in articles 1

ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ

Advertise under the article

ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ