THEFT: ಕಬ್ಬಿಣದ ಸೆಂಟ್ರಿಂಗ್ ಶೀಟ್ ಹಾಗೂ ಕಬ್ಬಿಣದ ಜಾಕ್ ಮತ್ತು ಪೈಪ್ ಕಳವು ಪ್ರಕರಣ- ಓರ್ವ ಆರೋಪಿ ಬಂಧನ
Thursday, September 14, 2023
ಮೂಡಬಿದ್ರೆ
ಠಾಣಾ ವ್ಯಾಪ್ತಿಯಲ್ಲಿ ಕಬ್ಬಿಣದ ಸೆಂಟ್ರಿಂಗ್ ಶೀಟ್ ಹಾಗೂ ಕಬ್ಬಿಣದ ಜಾಕ್ ಮತ್ತು ಪೈಪ್‌ಗಳನ್ನು ಕಳವು
ಮಾಡಿದ ಆರೋಪಿಯನ್ನು ಮೂಡಬಿದಿರೆ ಪೊಲೀಸರು ಬಂಧಿಸಿದ್ದಾರೆ. ಮೂಡಬಿದ್ರೆ ತಾಲೂಕಿನ ತೋಡಾರು ಗ್ರಾಮದ
ಇದಾಯತ್ ನಗರದ ಮಹಮ್ಮದ್ ಸಾಯಿಲ್ (21) ಬಂಧಿತ ಆರೋಪಿ.
ಬೆಳುವಾಯಿ ಹಾಗೂ ಕೆಸರುಗದ್ದೆ ಎಂಬಲ್ಲಿ ಕಬ್ಬಿಣದ ಸೆಂಟ್ರಿಂಗ್ ಶೀಟ್ ಹಾಗೂ ಕಬ್ಬಿಣದ ಜಾಕ್ ಮತ್ತು ಪೈಪ್‌ಗಳನ್ನು ಕಳ್ಳರು ಕಳ್ಳತನ ಮಾಡಿದ ಬಗ್ಗೆ ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಮೂಡಬಿದ್ರೆ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಸಂದೇಶ್ ಪಿ ಜಿ ಈ ಪ್ರಕರಣದಲ್ಲಿ ಕಳ್ಳತನ ಮಾಡಿದ ಮೊದಲನೆ ಆರೋಪಿ ಮಹಮ್ಮದ್ ಸಾಯಿಲ್ ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯಿಂದ ಸುಮಾರು 2,50,000 ರೂ ಮೌಲ್ಯದ ಕಬ್ಬಿಣದ ಸೆಂಟ್ರಿಂಗ್ ಶೀಟ್ ಹಾಗೂ ಕಬ್ಬಿಣದ ಜಾಕ್ ಮತ್ತು ಕಬ್ಬಿಣದ ಪೈಪನ್ನು ಸ್ವಾಧೀನ ಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ.