KARKALA: ಕಾರ್ಕಳ: ಪರಶುರಾಮ ಥೀಂ ಪಾರ್ಕ್ ಪ್ರವೇಶಕ್ಕೆ ತಾತ್ಕಾಲಿಕ ನಿಷೇಧ
ಕಾರ್ಕಳ: ಕಾರ್ಕಳ
ತಾಲೂಕು ಯರ್ಲಪಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪರಶುರಾಮ ಥೀಂ ಪಾರ್ಕ್ ಕಾಮಗಾರಿಯನ್ನು ಪೂರ್ಣಗೊಳಿಸಲು
ಅನುಕೂಲವಾಗುವಂತೆ ಅಕ್ಟೋಬರ್ 9ರಿಂದ ನವೆಂಬರ್ ತಿಂಗಳ ಅಂತ್ಯದವರೆಗೆ ಕಾಲಾವಕಾಶ ಬೇಕಾಗಿರುವ ಕಾರಣ
ಪ್ರವೇಶಕ್ಕೆ ತಾತ್ಕಾಲಿಕ ತಡೆ ನೀಡಲಾಗುತ್ತಿದೆ ಎಂದು ತಹಸೀಲ್ದಾರ್ ಅನಂತಶಂಕರ ತಿಳಿಸಿದ್ದಾರೆ.
ಥೀಂ ಪಾರ್ಕ್ 27 ಜನವರಿ 2023ರಂದು ಉದ್ಘಾಟನೆಗೊಂಡು ಪ್ರವಾಸಿಗರ ವೀಕ್ಷಣೆಗೆ ತಾತ್ಕಾಲಿಕವಾಗಿ ಅನುಕೂಲ ಕಲ್ಪಿಸಲಾಗಿತ್ತು. ಈ ಥೀಂ ಪಾರ್ಕ್ ನ ಕಾಮಗಾರಿಯಲ್ಲಿ ಪರಶುರಾಮನ ಮೂರ್ತಿಯನ್ನು ಬಲಪಡಿಸುವ, ಮೂರ್ತಿಗೆ ಸಿಡಿಲು ನಿರೋಧಕ ಅಳವಡಿಸುವ, ಮೂರ್ತಿಯ ತುಕ್ಕು ನಿರೋಧಕ ಲೇಪನದ ಹಾಗೂ ಇನ್ನಿತರ ಮುಕ್ತಾಯ ಕಾಮಗಾರಿಯನ್ನು ಪೂರ್ಣಗೊಳಿಸಲು ಅನುಕೂಲವಾಗುವಂತೆ ಸೆ.2023ರವರೆಗೆ ಪ್ರವಾಸಿಗರ ಭೇಟಿಯನ್ನು ನಿಷೇಧಿಸಲಾಗಿತ್ತು. ಅಕ್ಟೋಬರ್ 9ರಿಂದ ನವೆಂಬರ್ ತಿಂಗಳ ಅಂತ್ಯದವರೆಗೆ ಕಾಮಗಾರಿಯನ್ನು ಪೂರ್ಣಗೊಳಿಸಲು ಕಾಲಾವಕಾಶ ಬೇಕು ಎಂದು ನಿರ್ಮಿತಿ ಕೇಂದ್ರದವರು ಅಕ್ಟೋಬರ್ 7ರಂದು ಕೋರಿದ್ದಾರೆ. ಆದ್ದರಿಂದ ಕಾಮಗಾರಿಯನ್ನು ಪೂರ್ಣಗೊಳಿಸುವ ಉದ್ದೇಶದಿಂದ ಅಕ್ಟೋಬರ್ 9ರಿಂದ ನವೆಂಬರ್ ತಿಂಗಳ ಅಂತ್ಯದವರೆಗೆ ಯಾವುದೇ ಸಾರ್ವಜನಿಕ ಹಾಗೂ ಪ್ರವಾಸಿಗರ ಭೇಟಿಯನ್ನು ನಿಷೇಧಿಸಲಾಗಿದೆ ಎಂದು ತಹಸೀಲ್ದಾರ್ ತಿಳಿಸಿದ್ದಾರೆ.