THEFT: ಬಿಲ್ಡರ್ ಮನೆಯಿಂದ ಲಕ್ಷಾಂತರ ರೂ ಚಿನ್ನಾಭರಣ, ನಗದು ಕಳವು: ಕೆಲಸಕ್ಕಿದ್ದ ವ್ಯಕ್ತಿ ಮೇಲೆಯೇ ಸಂಶಯ

THEFT: ಬಿಲ್ಡರ್ ಮನೆಯಿಂದ ಲಕ್ಷಾಂತರ ರೂ ಚಿನ್ನಾಭರಣ, ನಗದು ಕಳವು: ಕೆಲಸಕ್ಕಿದ್ದ ವ್ಯಕ್ತಿ ಮೇಲೆಯೇ ಸಂಶಯ

 

ಪುದು ಗ್ರಾಮದ ಕೋಡಿಮಜಲು ನಿವಾಸಿ ಬಿಲ್ಡರ್ ಆಗಿರುವ ಮೊಹಮ್ಮದ್ ಝಫರುಲ್ಲಾ ಎಂಬವರ ಮನೆಯ ಕಪಾಟಿನೊಳಗೆ ಇರಿಸಲಾಗಿದ್ದ ಲಕ್ಷಾಂತರ ಬೆಲೆ ಬಾಳುವ ಚಿನ್ನಾಭರಣ ಸಹಿತ ಲಕ್ಷಾಂತರ ರೂ ಹಣ ಕಳವಾಗಿರುವ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಮನೆಯಲ್ಲಿ ಕೆಲಸಕ್ಕಿದ್ದ ವ್ಯಕ್ತಿಯೇ ಕದ್ದುಕೊಂಡು ಹೋಗಿರುವುದಾಗಿ ಅವರು ಪೋಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.  ಸುಮಾರು 27,50,000  ಲಕ್ಷ ರೂ ನಗದು ಹಾಗೂ 4,96,000 ಲಕ್ಷ ರೂ ಮೌಲ್ಯದ ವಿವಿಧ ಬಗೆಯ ಚಿನ್ನಾಭರಣಗಳನ್ನು ಕಳವು ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

ಪುದು ಗ್ರಾಮ ನಿವಾಸಿ ಮೊಹಮ್ಮದ್ ಝಫರುಲ್ಲಾ ಎಂಬವರ ದೂರಿನಂತೆ ಪ್ರಕರಣ ದಾಖಲಾಗಿದೆ. ತನ್ನ ಜೊತೆ  ಸುಮಾರು ಏಳೆಂಟು ತಿಂಗಳಿಂದ ಕಟ್ಟಡ ಕಾಮಗಾರಿಯ ಸಹಾಯಕನಾಗಿ ಪ್ರಕರಣದ ಆರೋಪಿ ಆಲಿ ಎಂಬಾತನು ಕೆಲಸ ಮಾಡಿಕೊಂಡಿದ್ದು, ವಿಶ್ವಾಸ ಗಳಿಸಿದ್ದ.

ಅ.18ರಂದು ತನ್ನ ತಂದೆ, ತಾಯಿ, ಅಕ್ಕ ಮತ್ತು ತಂಗಿಯವರು ತಮ್ಮನ ಮನೆಗೆ ಹೋಗುವ ಸಂದರ್ಭ ಮನೆಗೆ ಬೀಗ ಹಾಕಿ ಮನೆಯ ಕೀಯನ್ನು ಕಟ್ಟಡ ಕಾಮಗಾರಿ ಸಹಾಯಕ ಆಲಿ ಕೈಗೆ ನೀಡಿದ್ದಾರೆ. ಅಕ್ಟೋಬರ್ 23ರಂದು ರಾತ್ರಿ ಮನೆಯವರು ಮನೆಗೆ ಹಿಂತಿರುಗಿ, ಮನೆಯ ಕೀಯನ್ನು ಪಡೆಯಲು ಆಲಿಗೆ ಕರೆಮಾಡಿದಾಗ ಆತನ ಫೊನ್ ಸ್ವಿಚ್ ಆಫ್ ಆಗಿತ್ತು. ಬಳಿಕ ಮನೆ ಹೊರಗಡೆಯಿಂದ ಕಿಟಕಿ ಮೂಲಕ ನೋಡಿದಾಗ ಬೆಡ್ ರೂಮಿನಲ್ಲಿರುವ ಕಪಾಟಿನ ಲಾಕರ್ ಮುರಿದು ಅದರಲ್ಲಿ ಇದ್ದ ಸ್ವತ್ತುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದುಕೊಂಡಿರುವುದು ಕಂಡುಬಂದಿದೆ. ಮನೆಯನ್ನು ಪರಿಶೀಲಿಸಲಾಗಿ ನಗದು  ರೂಪಾಯಿ 27,50,000, ಅಂದಾಜು ರೂ 4,96,000 ಮೌಲ್ಯದ ಚಿನ್ನಾಭರಣಗಳು ಕಳವಾಗಿರುವುದು ಕಂಡುಬಂದಿದೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ.

ಮಾಲೀಕನ ಜೊತೆ ವಿಶ್ವಾಸದಿಂದಿದ್ದ ಆಲಿ:

ಝಫರುಲ್ಲಾ ಜೊತೆ ಸುಮಾರು  8 ತಿಂಗಳ ಹಿಂದೆ ಕಟ್ಟಡ ಕಾಮಗಾರಿಯ ಕೆಲಸಕ್ಕೆ ಮಂಜೇಶ್ವರ ಮೂಲದ ಆಲಿ ಎಂಬಾತ ಸೇರಿದ್ದ. ಮಾಲಕರ ಜೊತೆ ಹೆಚ್ಚಿನ ವಿಶ್ವಾಸ ಹೊಂದಿದ್ದ. ಕಾರಣಕ್ಕಾಗಿ ಸಹಾಯಕನಾಗಿ ದುಡಿಯುತ್ತಿದ್ದ ಆಲಿ ಮನೆಯವರ ವಿಶ್ವಾಸವನ್ನೂ ಗಳಿಸಿದ್ದ. ಈತನ ಮೇಲಿರಿಸಿದ್ದ ಅತೀ ವಿಶ್ವಾಸ ಮಾಲೀಕರಿಗೆ ಮುಳುವಾಗಿ ಪರಿಣಮಿಸಿತು.

 .18 ರಂದು ಮನೆ ಮಂದಿ ಎಲ್ಲರು ಮನೆಗೆ ಬೀಗ ಹಾಕಿ  ಮಂಗಳಾದೇವಿ, ಜಪ್ಪುನಲ್ಲಿರುವ ತಮ್ಮನ ಮನೆಗೆ ಹೋಗಿದ್ದರು. ಮನೆಗೆ ಬೀಗ ಹಾಕಿ ಅದರ ಕೀ ಯನ್ನು ಆಲಿಯಲ್ಲಿ ನೀಡಿದ್ದರು. ಬಳಿಕ 19 ರಂದು ಕಟ್ಟಡ ಕಾಮಗಾರಿ ವಿಚಾರಕ್ಕೆ ಮೊಹಮ್ಮದ್ ಅವರು ಈತನಿಗೆ ಪೋನ್ ಮಾಡಿದಾಗ ಪೋನ್ ಸ್ವಿಚ್ ಆಫ್ ಆಗಿತ್ತು.  ಆದರೆ ಪೋನ್ ಸ್ವಿಚ್ ಆಫ್ ಆಗಿರುವ ವಿಚಾರವನ್ನು ಅಷ್ಟಾಗಿ ಸೀರಿಯಸ್ ಆಗಿ ತೆಗೆದುಕೊಂಡಿರದ ಮಾಲೀಕರು ಮರುದಿನ ಅಂದರೆ . 20 ರಂದು ಅಗತ್ಯ ಕೆಲಸವೊಂದರ ನಿಮಿತ್ತ ಬೆಂಗಳೂರಿಗೆ ತೆರಳಿದ್ದರು. ಬೆಂಗಳೂರಿಗೆ ತೆರಳಿದ ಬಳಿಕ ಅಲ್ಲಿಂದ ಪೋನ್ ಮಾಡಿದಾಗಲೂ ಈತನ ಮೊಬೈಲ್ ಆಫ್ ಆಗಿತ್ತು.  ಕೆಲಸದ ಒತ್ತಡದ ನಡುವೆ . 23 ರಂದು  ಊರಿಗೆ ವಾಪಾಸು ಆದ ಇವರು  ರಾತ್ರಿ ಸುಮಾರು 8 ಗಂಟೆಗೆ ಮನೆಗೆ ಬಂದು ನೋಡಿದಾಗ ಮನೆಯ ಬಾಗಿಲು ಹಾಕಿಕೊಂಡಿತ್ತು. ಕೀ ಕೊಡುವಂತೆ ಆತನಿಗೆ ಪೋನ್ ಮಾಡಿದಾಗ ಆಗಲೂ ಆಫ್ ಆಗಿತ್ತು. ಸಂಶಯದಿಂದ ಮನೆಯ ಹಿಂಬದಿಯಿಂದ ಕಿಟಕಿಯಲ್ಲಿ ಇಣುಕಿ ನೋಡಿದಾಗ ಕೋಣೆಯ ಬಾಗಿಲು ತೆರದುಕೊಂಡಿದ್ದು, ಕಪಾಟಿನ ಲಾಕರ್ ಮುರಿದು ಅದರಲ್ಲಿ ಇದ್ದ ಸೊತ್ತುಗಳು ಚೆಲ್ಲಾಪಿಲ್ಲಿಯಾಗಿ ಬಿದ್ದುಕೊಂಡಿತ್ತು.

ಕೂಡಲೇ ಗ್ರಾಮಾಂತರ ಪೋಲಿಸರಿಗೆ ದೂರು ನೀಡಿ , ಪೋಲೀಸ್ ಸಮಕ್ಷಮದಲ್ಲಿ ಮನೆಯ ಬಾಗಿಲು ಮುರಿದು ಒಳಗೆ ಹೋಗಿನೋಡಿದಾಗ ಲಕ್ಷಾಂತರ ರೂ ಮೌಲ್ಯದ ನಗ, ನಗದು ಕಳವಾಗಿರುವುದು ಗೊತ್ತಗಿದೆ.ಘಟನೆ ನಡೆದ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್, ಎಸ್..ಹರೀಶ್  ಹಾಗೂ ಬೆರಳಚ್ಚು  ತಜ್ಞರು,ಶ್ವಾನದಳದವರು ಆಗಮಿಸಿ  ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.

Ads on article

Advertise in articles 1

ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ

Advertise under the article

ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ