ACTRESS LEELAVATHI  ಕರಾವಳಿಯಲ್ಲಿ ಹುಟ್ಟಿ ಸ್ಯಾಂಡಲ್ ವುಡ್ ನಲ್ಲಿ ಮಿಂಚಿದ್ದರು ಲೀಲಾವತಿ: ನಟಿಯ ಚಿತ್ರಪಯಣ ಹೀಗಿದೆ

ACTRESS LEELAVATHI ಕರಾವಳಿಯಲ್ಲಿ ಹುಟ್ಟಿ ಸ್ಯಾಂಡಲ್ ವುಡ್ ನಲ್ಲಿ ಮಿಂಚಿದ್ದರು ಲೀಲಾವತಿ: ನಟಿಯ ಚಿತ್ರಪಯಣ ಹೀಗಿದೆ

 

85 ವರ್ಷದ ಕನ್ನಡದ ಹಿರಿಯ ನಟಿ ಲೀಲಾವತಿ ಇನ್ನಿಲ್ಲ. ಇಂದು ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದು, ಪುತ್ರ ವಿನೋದ್​ ರಾಜ್ ಅವರನ್ನು ಅಗಲಿದ್ದಾರೆ. ನೆಲಮಂಗಲದ ಜ್ಯೂನಿಯರ್ ಕಾಲೇಜು ಎದುರಿನ ಅಂಬೇಡ್ಕರ್ ಮೈದಾನದಲ್ಲಿ ನಾಳೆ ಮಧ್ಯಾಹ್ನದವರೆಗೂ ಸಾರ್ವಜನಿಕರ ದರ್ಶನಕ್ಕೆ ಸಿದ್ದತೆ ಮಾಡಲಾಗುತ್ತಿದೆ.

1938ರಲ್ಲಿ ದಕ್ಷಿಣ ಕನ್ನಡದ ಬೆಳ್ತಂಗಡಿಯಲ್ಲಿ ಜನಿಸಿದ್ದ ಲೀಲಾವತಿ ಅವರು 50 ವರ್ಷಗಳ ಕಾಲ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿದ್ದರು. ಕನ್ನಡ ದಿಗ್ಗಜ ನಟರಾಟ ರಾಜ್​ಕುಮಾರ್​ಮುಂತಾದವರ ಜೊತೆ ಅಭಿನಯಿಸಿದ್ದರು. ಕನ್ನಡ, ತಮಿಳು, ತೆಲುಗು ಸೇರಿದಂತೆ 600ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ.ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಹುಟ್ಟಿದ್ದ ಲೀಲಾವತಿ ಮುಂದೆ ಕನ್ನಡದ ಜನಪ್ರಿಯ ನಟಿಯಾದವರು.

ಚಿಕ್ಕವಯಸ್ಸಿನಲ್ಲಿ ನಾಟಕದತ್ತ ಆಸಕ್ತರಾಗಿದ್ದ ಅವರು ಮೈಸೂರಿನಲ್ಲಿ ವೃತ್ತಿರಂಗಭೂಮಿಯಲ್ಲಿ ತೊಡಗಿಸಿಕೊಂಡವರು. ಸುಬ್ಬಯ್ಯ ನಾಯ್ಡು, ಮಹಾಲಿಂಗ ಭಾಗವತರ ನಾಟಕ ಸಂಸ್ಥೆಗಳಲ್ಲಿ ಕೆಲಸ ಮಾಡಿದವರು.

1949ರಲ್ಲಿ ಶಂಕರ್ ಸಿಂಗ್ ಅವರ ನಾಗಕನ್ನಿಕ ಚಿತ್ರದಲ್ಲಿ ಸಖಿಯ ಪಾತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪ್ರವೇಶಿಸಿದ ಅವರು ನಾಯಕಿಯಾಗಿ ಮಾಂಗಲ್ಯಯೋಗ ಚಿತ್ರದಲ್ಲಿ ನಟಿಸಿದ್ದರು. ಆದರೆ ಅವರಿಗೆ ದೊಡ್ಡ ಬ್ರೇಕ್ ನೀಡಿದ್ದು, ಡಾ. ರಾಜ್ ಕುಮಾರ್ ಜೊತೆ ನಟಿಸಿದ ಚಿತ್ರ ರಣಧೀರ ಕಂಠೀರವ.ಬಳಿಕ ರಾಣಿ ಹೊನ್ನಮ್ಮ ಹೀಗೆ ಹಲವು ಚಿತ್ರಗಳಲ್ಲಿ ರಾಜ್ ಕುಮಾರ್ ಮತ್ತು ಲೀಲಾವತಿ  ಜೋಡಿ ಜನಪ್ರಿಯ ತಾರಾಜೋಡಿಯಾಗಿತ್ತು. ಸಂತ ತುಕಾರಾಂ, ಕಣ್ತೆರೆದು ನೋಡು, ಕೈವಾರ ಮಹಾತ್ಮೆ, ಗಾಳಿ ಗೋಪುರ, ಕನ್ಯಾರತ್ನ, ಕುಲವಧು, ವೀರ ಕೇಸರಿ, ಮನ ಮೆಚ್ಚಿದ ಮಡದಿ ಹೀಗೆ ಹಲವಾರು ಚಿತ್ರಗಳ ನಾಯಕಿಯಾಗಿದ್ದ ಲೀಲಾವತಿ 60ರ ದಶಕದ ಟಾಪ್ ನಟಿಯಾಗಿದ್ದರು. ಬಳಿಕ ಪೋಷಕ ಪಾತ್ರಗಳಲ್ಲಿ ಕಾಣಿಸಿಕೊಂಡರು. ಅಮ್ಮನಾಗಿ, ಅಜ್ಜಿಯಾಗಿ ಪೋಷಕಪಾತ್ರಗಳಲ್ಲಿ ನಟಿಸಿದ ಲೀಲಾವತಿ ನೂರಾರು ಕನ್ನಡ ಚಿತ್ರಗಳಲ್ಲಿ ಅಮ್ಮನ ಪಾತ್ರದಲ್ಲಿ ಅಭಿನಯಿಸುವ ಮೂಲಕ ಕನ್ನಡ ಚಿತ್ರರಂಗದ ‘’ಅಮ್ಮ’’ ಎಂದೇ ಪ್ರೀತಿಯಿಂದ ಗುರುತಿಸಲ್ಪಟ್ಟರು.


Ads on article

Advertise in articles 1

ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ

Advertise under the article

ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ