CRIME: ಎಂ.ಡಿ.ಎಂ.ಎ. ಸಾಗಾಟ ಪ್ರಕರಣದಲ್ಲಿ ಇಬ್ಬರ ಬಂಧನ, ಎರಡೂ ಮಂದಿಯ ಕ್ರಿಮಿನಲ್ ಹಿನ್ನೆಲೆ ಕುರಿತು ಪೊಲೀಸ್ ನೀಡಿದರು ಮಾಹಿತಿ
ಮಂಗಳೂರಿನ ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪಡೀಲ್ ರೈಲ್ವೆ ಬ್ರಿಜ್ ನಿಂದ ಸರಿಪಳ್ಳಕ್ಕೆ ಹೋಗುವ ಕಚ್ಚಾ ರಸ್ತೆಯಲ್ಲಿ ಕಪ್ಪು ಬಣ್ಣದ ಹೊಂಡ ಆಕ್ಟಿವ್ ಸ್ಕೂಟರ್ ನಲ್ಲಿ ಮಾದಕ ವಸ್ತುವಾದ MDMA ನ್ನು ಮಾರಾಟ ಮಾಡುತ್ತಿರುವುದಾಗಿ ಮಾಹಿತಿ ಬಂದ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಅಶ್ಪಾಕ್ ಯಾನೆ ಜುಟ್ಟು ಅಶ್ಪಾಕ(27) ಉಮರ್ ಫಾರೂಕ್ ಇರ್ಫಾನ್ (26) ಇವರನ್ನು ದಸ್ತಗಿರಿ ಮಾಡಿ ಅವರಿಂದ 19 ಗ್ರಾಂ MDMA ಹಾಗು ಕೃತ್ಯಕ್ಕೆ ಬಳಸಿದ ಸ್ಕೂಟರ್ ಹಾಗೂ ಮೊಬೈಲ್ ಫೋನ್ ಗಳನ್ನು ಸ್ವಾಧೀನ ಪಡಿಸಿಕೊಂಡಿದೆ. ಇವುಗಳ ಒಟ್ಟು ಮೌಲ್ಯ ರೂ 1,92,800 ಆಗಿದೆ.
ಕ್ರಿಮಿನಲ್ ಹಿನ್ನೆಲೆಯ ಆರೋಪಿಗಳು
ಆರೋಪಿತ ಜುಟ್ಟು ಅಶ್ಪಕ್ ಮೇಲೆ ಮಂಗಳೂರು ನಗರದ ಮಂಗಳೂರು ಗ್ರಾಮಾಂತರ
ಪೊಲೀಸ್ ಠಾಣೆ, ಕಂಕನಾಡಿ ನಗರ ಪೊಲೀಸ್ ಠಾಣೆ, ಉಳ್ಳಾಲ ಪೊಲೀಸ್ ಠಾಣೆ, ಸುರತ್ಕಲ್ ಪೊಲೀಸ್, ಮಂಗಳೂರು
ದಕ್ಷಿಣ ಪೊಲೀಸ್ ಠಾಣೆಗಳಲ್ಲಿ ಕೊಲೆ ಯತ್ನ ದರೋಡೆ
ಸುಲಿಗೆ ದೋಂಬಿಯಂತಹ ಒಟ್ಟು 12 ಪ್ರಕರಣಗಳು ದಾಖಲಾಗಿರುತ್ತವೆ. ಆರೋಪಿತ ಉಮ್ಮರ್ ಫಾರೂಕ್ ಇರ್ಫಾನ್
ನ ಮೇಲೆ ಮಂಗಳೂರು ದಕ್ಷಿಣ, ಮಂಗಳೂರು ಗ್ರಾಮಾಂತರ, ಉಳ್ಳಾಲ ಪೊಲೀಸ್ ಠಾಣೆ, ಮೂಡಬಿದ್ರೆ ಪೊಲೀಸ್ ಠಾಣೆ,
ಬರ್ಕೆ ಪೊಲೀಸ್ ಠಾಣೆ, ಕೊಣಜೆ ಪೊಲೀಸ್ ಠಾಣೆ, ಸುರತ್ಕಲ್ ಪೊಲೀಸ್ ಠಾಣೆ, ಕಾರ್ಕಳ ನಗರ ಪೊಲೀಸ್ ಠಾಣೆ,
ಶಿವ ಪೊಲೀಸ್ ಠಾಣೆ, ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ, ಮಂಗಳೂರು ಉತ್ತರ ಪೊಲೀಸ್ ಠಾಣೆ, ಮಂಗಳೂರು
ಪೂರ್ವ ಪೊಲೀಸ್ ಠಾಣೆಗಳಲ್ಲಿ ಆರೋಪಿತನ ವಿರುದ್ಧ ಕೊಲೆಯತ್ನ, ದರೋಡೆ, ಸುಲಿಗೆ, ಸರಗಳ್ಳತನ, ದೊಂಬಿ,
ವಾಹನ ಕಳ್ಳತನದಂತಹ ಒಟ್ಟು 25 ಪ್ರಕರಣಗಳು ದಾಖಲಾಗಿರುತ್ತವೆ