-->
NEWS: ಮಲ್ಪೆ ಮೀನುಗಾರರ ಅಪಹರಣ, ಒತ್ತೆಯಾಳಾಗಿರಿಸಿದ ದುಷ್ಕರ್ಮಿಗಳು

NEWS: ಮಲ್ಪೆ ಮೀನುಗಾರರ ಅಪಹರಣ, ಒತ್ತೆಯಾಳಾಗಿರಿಸಿದ ದುಷ್ಕರ್ಮಿಗಳು

 

ಚಿತ್ರ: ಸಾಂದರ್ಭಿಕ

ಮೀನುಗಾರಿಕೆ ಮುಗಿಸಿ ವಾಪಸು ಬರುತ್ತಿರುವ ಆಳಸಮುದ್ರ ಬೋಟನ್ನು ತಡೆದು ನಿಲ್ಲಿಸಿ ಬೋಟಿನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಮೀನು, ಡೀಸೆಲ್ಸಹಿತ 7 ಮಂದಿ ಮೀನುಗಾರರನ್ನು 25 ಜನರ ತಂಡ ಅಪಹರಿಸಿದ ಘಟನೆ ಭಟ್ಕಳದ ಮಾವಿನ ಕುರ್ವೆ ಬಂದರಿನಲ್ಲಿ ನಡೆದಿದೆ.

ಮಲ್ಪೆಯ ಚೇತನ್ಸಾಲ್ಯಾನ್ಅವರಿಗೆ ಸೇರಿದ ಕೃಷ್ಣನಂದನ ಆಳಸಮುದ್ರ ಬೋಟಿನಲ್ಲಿ ಘಟನೆ ನಡೆದಿಧೇ. ಅದರಲ್ಲಿ ಮೀನುಗಾರಿಕೆಗೆ ತೆರಳಿದ್ದ ನಾಗರಾಜ್ಹರಿಕಾಂತ್‌, ನಾಗರಾಜ್ಎಚ್‌., ಅರುಣ್ಹರಿಕಾಂತ ಅಂಕೋಲ, ಅಶೋಕ ಕುಮಟಾ, ಕಾರ್ತಿಕ ಹರಿಕಾಂತ ಮಂಕಿ, ಚಂದ್ರಕಾಂತ ಹರಿಕಾಂತ ಉಪ್ಪುಂದ, ಸುಬ್ರಹ್ಮಣ್ಯ ಖಾರ್ವಿ ಅವರನ್ನು ಬಂಧನದಲ್ಲಿರಿಸಲಾಗಿದೆ.

ಫೆ. 26 ತಡರಾತ್ರಿ ಮೀನುಗಾರಿಕೆ ಮುಗಿಸಿ ಮಲ್ಪೆ ಬಂದರು ಕಡೆ ಬರುತ್ತಿರುವಾಗ ಭಟ್ಕಳ ಸಮೀಪ ಬೋಟಿನ ಬಲೆ ಫ್ಯಾನಿಗೆ ಬಿದ್ದು ಎಂಜಿನ್ಸ್ಥಗಿತಗೊಂಡು ಬೋಟು ನಿಂತಿತ್ತು.

ಬೋಟು ನಿಂತ ವೇಳೆ ಅದನ್ನು ಗಮನಿಸತೊಡಗಿದ್ದಾಗ ಎಲ್ಲಿಂದಲೋ ಬಂದ ಸುಮಾರು 25 ಮಂದಿ ಒಮ್ಮಿಂದೊಮ್ಮೆಲೆ ಬಂದು ಅಕ್ರಮಣಗೈದು ಬೋಟನ್ನು ತೀರ ಪ್ರದೇಶಕ್ಕೆ ಎಳೆದೊಯ್ದಿದ್ದಾರೆ. ಬೋಟಿನಲ್ಲಿದ್ದ ಸುಮಾರು 8 ಲಕ್ಷ ರೂ. ಮೌಲ್ಯದ ಮೀನು, 7,500 ಲೀ ಡೀಸೆಲ್ಅನ್ನು ದೋಚಿದ್ದಲ್ಲದೆ ಬೋಟಿನಲ್ಲಿದ್ದ 7 ಮಂದಿ ಮೀನುಗಾರರನ್ನು ಒತ್ತೆಯಾಳುಗಳಾಗಿ ಇರಿಸಿಕೊಂಡಿದ್ದಾರೆ ಎನ್ನಲಾಗಿದೆ.


Ads on article

Advertise in articles 1

ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ

Advertise under the article

ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ