PROTEST: ಮಂಗಳೂರಲ್ಲಿ ಕಾಂಗ್ರೆಸ್ ಕಚೇರಿ ಮುತ್ತಿಗೆ ಯತ್ನಿಸಿದ ಬಿಜೆಪಿ

PROTEST: ಮಂಗಳೂರಲ್ಲಿ ಕಾಂಗ್ರೆಸ್ ಕಚೇರಿ ಮುತ್ತಿಗೆ ಯತ್ನಿಸಿದ ಬಿಜೆಪಿ

ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಬುಧವಾರ ಮಂಗಳೂರಲ್ಲಿ ನಡೆಯಿತು.
ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ವಿಧಾನಸೌಧ ಆವರಣದಲ್ಲಿ ಕೂಗಲಾಗಿದೆ ಎಂದು ಆರೋಪಿಸಿ ಈ ಪ್ರತಿಭಟನೆ.
ಮಲ್ಲಿಕಟ್ಟೆಯಲ್ಲಿರುವ ದ.ಕ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ನೂರಕ್ಕೂ ಅಧಿಕ ಬಿಜೆಪಿ ಕಾರ್ಯಕರ್ತರು ಮುತ್ತಿಗೆಗೆ ಯತ್ನಿಸಿದರು. 
ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕುವ ಸುಳಿವನ್ನು ಅರಿತ ಪೊಲೀಸರು ಭಾರಿ ಸಂಖ್ಯೆಯಲ್ಲಿ ಕಾಂಗ್ರೆಸ್ ಕಚೇರಿಗೆ ಭದ್ರತೆಯನ್ನು ಒದಗಿಸಿದ್ದರು.
 ಬಿಜೆಪಿ ಕಾರ್ಯಕರ್ತರು ಒಮ್ಮಿಂದೊಮ್ಮೆಲೆ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ವಿರುದ್ದ ಘೋಷಣೆಗಳನ್ನು ಹಾಕುತ್ತಿದ್ದಂತೆ ಕಾಂಗ್ರೆಸ್ ಕಚೇರಿ ಮುಂಭಾಗದಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ಜೈಕಾರ ಹಾಕಿದರು.

Ads on article

Advertise in articles 1

ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ

Advertise under the article

ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ