MODI TO SIRSI: ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣ ಒಳಗಡೆ ಸಾರ್ವಜನಿಕರ ಪ್ರವೇಶ ನಿಷೇಧ.: ಜಿಲ್ಲಾಧಿಕಾರಿ
Tuesday, April 23, 2024
ಏಪ್ರಿಲ್ 28 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ರವರು ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಮಾರಿಕಾಂಬಾ ಮೈದಾನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸುತ್ತಿರುವುದರಿಂದ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಠಿಯಿಂದ, ಮುಂಜಾಗೃತಾ ಕ್ರಮವಾಗಿ ಎಪ್ರಿಲ್ 26 ರಿಂದ ಏಪ್ರಿಲ್ 28 ರ ಬೆಳಗ್ಗೆ 8 ಗಂಟೆಯವರೆಗೆ ಶಿರಸಿ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣ ಒಳಗಡೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಆದೇಶಿಸಿದ್ದಾರೆ.