ACCIDENT: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ತಾಯಿ, ಮಗ ಸಾವು
Monday, May 20, 2024
ಶಿರಾಡಿ ಘಾಟ್ ವ್ಯಾಪ್ತಿ ಪ್ರದೇಶದ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಇನ್ನೋವಾ ಹಾಗೂ ಕಂಟೈನರ್ ನಡುವೆ ಢಿಕ್ಕಿ ಸಂಭವಿಸಿ ತಾಯಿ – ಮಗ ಸಾವನ್ನಪ್ಪಿ, ಇತರರಿಗೆ ಗಂಭೀರ ಗಾಯಗಳಾಗಿರುವ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಪಾಣೆ ಮಂಗಳೂರು ಸಮೀಪದ ಬೊಂಡಾಲದ ಶಬೀರ್ ಅಹಮ್ಮದ್ ಎಂಬುವರ ಪತ್ನಿ ಶಫಿಯ (48) ಹಾಗೂ ಅವರ ಪುತ್ರ ಶಫೀಕ್ (21) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಕಾರಿನಲ್ಲಿ ಮಕ್ಕಳು ಸೇರಿ 6 ಮಂದಿ ಇದ್ದರು ಎನ್ನಲಾಗಿದ್ದು, ಎಲ್ಲರಿಗೂ ಗಂಭೀರ ಸ್ವರೂಪದ ಗಾಯಗಳಾಗಿದೆ. ಸದ್ಯ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.