UTTARA KANNADA: ಉತ್ತರ ಕನ್ನಡ ಜಿಲ್ಲೆಯಲ್ಲಿ 16,41,156 ಮಂದಿಯಿಂದ ಹಕ್ಕು ಚಲಾವಣೆ : ಡಿಸಿ
Wednesday, May 1, 2024
ಲೋಕಸಭಾ ಸಾರ್ವತ್ರಿಕ ಚುನಾವಣೆ-೨೦೨೪ ಕ್ಕೆ ಸಂಬಂಧಿಸಿದಂತೆ, ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮೇ ೭ ರಂದು ಮತದಾನ ನಡೆಯಲಿದ್ದು, ಒಟ್ಟು ೧೯೭೭ ಮತಗಟ್ಟೆಗಳಲ್ಲಿ ೧೬,೪೧,೧೫೬ ಮಂದಿ ತಮ್ಮ ಮತದಾನದ ಹಕ್ಕು ಚಲಾಯಿಸಲಿದ್ದು, ಈ ಬಾರಿಯ ಚುನಾವಣೆಯಲ್ಲಿ ಲೋಕಸಭಾ ಕ್ಷೇತ್ರದ ಮತದಾರರಿಗೆ ಮುಖ್ಯ ಆಕರ್ಷಣೆಯಾಗಿ ೬೬ ವಿಶೇಷ ಮತಗಟ್ಟೆಗಳನ್ನು ಸಿದ್ದಪಡಿಸಲಾಗುತ್ತಿದೆ.ಚುನಾವಣಾ ಆಯೋಗದ ನಿರ್ದೇಶನದನ್ವಯ ಉತ್ತರ ಕನ್ನಡ ಲೋಕಸಭಾ ವ್ಯಾಪ್ತಿಯಲ್ಲಿ, ಈ ಬಾರಿಯ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಜಿಲ್ಲೆಯಲ್ಲಿನ ಮಹಿಳೆಯರು, ವಿಕಲಚೇತನರು, ಯುವ ಸಮುದಾಯವನ್ನು ಪ್ರತಿಬಿಂಬಿಸುವ ಮತ್ತು ಸ್ಥಳೀಯ ವೈವಿದ್ಯತೆಯನ್ನು ಪರಿಚಯಿಸುವ ಮಾದರಿಯಲ್ಲಿ ೬೬ ವಿಶೇಷ ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತಿದೆ ಎನ್ನುತ್ತಾರೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ