MANGALORE : ದಕ್ಷಿಣ ಕನ್ನಡ ಎಸ್ಪಿಯಾಗಿ ಯತೀಶ್ ನೇಮಕ
Tuesday, July 2, 2024
ರಾಜ್ಯ ಸರಕಾರ ಜುಲೈ 2 ರಂದು ಹಲವು ಪೊಲೀಸ್ ಅಧಿಕಾರಿಗಳನ್ನು(IPS) ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಸರಕಾರದ ಆದೇಶದ ಪ್ರಕಾರ, ಯತೀಶ್ ಎನ್. ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ (SP) ನೇಮಿಸಲಾಗಿದೆ. ಸಿ.ಬಿ.ರಿಷ್ಯಂತ್ ಅವರನ್ನು ಬೆಂಗಳೂರಿನ ವೈರ್‌ಲೆಸ್ ಎಸ್ ಪಿ ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ.2016 ರ ಕರ್ನಾಟಕ ಕೇಡರ್‌ನ ಐಪಿಎಸ್ ಅಧಿಕಾರಿ ಯತೀಶ್ ಎನ್. ಅವರು ಮಂಡ್ಯ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು.
ಇನ್ನೂ ಹಲವಾರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದ್ದು, ಗುಪ್ತಚರ ವಿಭಾಗದ ಪೊಲೀಸ್ ಮಹಾನಿರೀಕ್ಷಕ ಲಾಭು ರಾಮ್ ಅವರನ್ನು ಬೆಂಗಳೂರಿನ ಕೇಂದ್ರ ಶ್ರೇಣಿಯ ಪೊಲೀಸ್ ಮಹಾನಿರೀಕ್ಷಕರಾಗಿ ವರ್ಗಾವಣೆ ಮಾಡಲಾಗಿದೆ