BJP: ಬಿಜೆಪಿ ಜಿಲ್ಲಾ ಎಸ್.ಟಿ. ಮೋರ್ಚಾ ಸಭೆ
Thursday, September 12, 2024
ಮಂಗಳೂರು: ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಎಸ್.ಟಿ. ಮೋರ್ಚದ ಸಭೆಯು ಎಸ್.ಟಿ. ಮೋರ್ಚಾದ ಜಿಲ್ಲಾಧ್ಯಕ್ಷ ಹರೀಶ್ ಬಿಜತ್ರೆ ಅಧ್ಯಕ್ಷತೆಯಲ್ಲಿ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹಾಗೂ ಉಪಾಧ್ಯಕ್ಷ ಪ್ರಸನ್ನ ಮಾರ್ತ ಉಪಸ್ಥಿತಿಯಲ್ಲಿ ಮಂಗಳೂರು ಪಕ್ಷದ ಕಚೇರಿಯಲ್ಲಿ ನಡೆಯಿತು.
ಸದಸ್ಯತ್ವ ನೋಂದಾವಣೆ ಮಾಡುವ ಬಗ್ಗೆ ಹಾಗೂ ಸಂಘಟನಾತ್ಮಕ ವಿಷಯಗಳ ಬಗ್ಗೆ ಜಿಲ್ಲಾ ಸಮಿತಿಯ ಅಧ್ಯಕ್ಷರಾದ ಸತೀಶ್ ಕುಂಪಲ ಮಾತಾನಾಡಿ, ಎಲ್ಲಾ ಮಂಡಲಗಳಿಗೂ ಪ್ರವಾಸವನ್ನು ಜೋಡಿಸಿ ಮೋರ್ಚಾವನ್ನು ಇನ್ನಷ್ಟು ಬಲಿಷ್ಟಗೊಳಿಸಲು ವಿನಂತಿಸುವುದರೊಂದಿಗೆ ಸರ್ವ ರೀತಿಯ ಸಂಪೂರ್ಣ ಸಹಕಾರ ನೀಡುತ್ತೇನೆಂದು ತಿಳಿಸಿದರು.
ಉಪಾಧ್ಯಕ್ಷರಾದ ಪ್ರಸನ್ನ ಮಾರ್ತರವರು ಮಾತಾನಾಡಿ ರಾಜ್ಯ ಸರಕಾರ ಎಸ್.ಟಿ. ಸಮುದಾಯದವರಿಗೆ ಮಾಡುತ್ತಿರುವ ಅನ್ಯಾಯ ವಿರುದ್ದ ಪ್ರತಿಭಟಿಸುವಂತೆ ಕರೆ ನೀಡುವುದರೊಂದಿಗೆ, ಉತ್ತಮ ಕಾರ್ಯ ಚಟುವಟಿಕೆಯ ಮೋರ್ಚಾವಾಗುವಲ್ಲಿ ಸಂಪೂರ್ಣ ಸಹಕಾರವನ್ನು ನೀಡುತ್ತೇನೆಂದು ಭರವಸೆ ನೀಡಿ ಶುಭಹಾರೈಸಿದರು.
ಸಭೆಯಲ್ಲಿ ಉಪಸ್ಥಿತರಿದ್ದ ಜಿಲ್ಲಾ ಎಸ್.ಟಿ. ಮೋರ್ಚಾದ ಉಪಾಧ್ಯಕ್ಷರಾದ ಬುದ್ಧ ನಾಯ್ಕರವರು ಸುಳ್ಯ ನಗರ ಪಂಚಾಯತ್ ಉಪಾಧ್ಯಕ್ಷರಾಗಿ ಆಯ್ಕೆ ಆಗಿರುವುದಕ್ಕೆ ಅಭಿನಂದನೆಯನ್ನು ಸಲ್ಲಿಸುವುದರೊಂದಿಗೆ, ಸನ್ಮಾನಿಸಿ ಗೌರವಿಸಲಾಯಿತು. ಸಭೆಯಲ್ಲಿ ಜಿಲ್ಲಾ ಎಸ್.ಟಿ. ಮೋರ್ಚಾದ ಪದಾಧಿಕಾರಿಗಳು ಹಾಗೂ ಸದಸ್ಯರು, ಪ್ರಮುಖ ಆಹ್ವಾನಿತರು, ಜಿಲ್ಲೆಯ ಮಂಡಲ ಸಮಿತಿಗಳ ಎಸ್.ಟಿ. ಮೋರ್ಚಾದ ಅಧ್ಯಕ್ಷರುಗಳು ಹಾಗೂ ಪ್ರಧಾನ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.
ಜಿಲ್ಲಾ ಎಸ್ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಜಯರಾಮ ನಾಯ್ಕ ಕುಂಟ್ರಕಲ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಪೂವಪ್ಪ ನಾಯ್ಕ ಆಲಂಕಾರು ವಂದನಾರ್ಪನೆಗೈವುದರೊಂದಿಗೆ ಸಭೆಯನ್ನು ಮುಕ್ತಾಯಗೊಳಿಸಲಾಯಿತು.