KPSC: ಎರಡು ತಿಂಗಳಲ್ಲಿ ಕೆಪಿಎಸ್ಸಿ ಮರುಪರೀಕ್ಷೆ: ಸಿಎಂ ಸಿದ್ದರಾಮಯ್ಯ

KPSC: ಎರಡು ತಿಂಗಳಲ್ಲಿ ಕೆಪಿಎಸ್ಸಿ ಮರುಪರೀಕ್ಷೆ: ಸಿಎಂ ಸಿದ್ದರಾಮಯ್ಯ


ಕೆಪಿಎಸ್‌ಸಿ ಗೆಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡಕ್ಕೆ ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು ಅಸಮರ್ಪಕವಾಗಿದ್ದವೆಂಬ ವಿಚಾರ ನನ್ನ ಗಮನಕ್ಕೆ ಬಂದ ತಕ್ಷಣ, ಪರೀಕ್ಷಾರ್ಥಿಗಳಿಗೆ ಅನ್ಯಾಯವಾಗಬಾರದೆಂಬ ಉದ್ದೇಶದಿಂದ ಮುಂದಿನ ಎರಡು ತಿಂಗಳುಗಳ ಒಳಗೆ ಮರುಪರೀಕ್ಷೆ ಮಾಡುವಂತೆ ಕೆಪಿಎಸ್‌ಸಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕರ್ತವ್ಯ ಲೋಪವೆಸಗಿದ ಅಧಿಕಾರಿಗಳನ್ನು ಸೇವೆಯನ್ನು ಅಮಾನತು ಮಾಡಲಾಗಿದೆ. ಮುಂಬರುವ ಪರೀಕ್ಷೆಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ, ಸಮರ್ಪಕವಾಗಿ ನಡೆಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದವರು ತಿಳಿಸಿದ್ದಾರೆ.

ನಾವು ನೇಮಕಾತಿ ಪ್ರಕ್ರಿಯೆಗಳ ಸಮಗ್ರತೆ ಮತ್ತು ನಂಬಿಕಾರ್ಹತೆಯನ್ನು ಎತ್ತಿಹಿಡಿದು, ಪರೀಕ್ಷಾರ್ಥಿಗಳ ಹಿತರಕ್ಷಿಸಲು ಬದ್ಧರಾಗಿದ್ದೇವೆ ಎಂದವರು ಹೇಳಿದ್ದಾರೆ.

Ads on article

Advertise in articles 1

ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ

Advertise under the article

ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ