-->
APPOINTMENTS: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ; ಡಿ.14 ರಂದು ಚಾಲನಾ ವೃತ್ತಿ ಪರೀಕ್ಷೆ

APPOINTMENTS: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ; ಡಿ.14 ರಂದು ಚಾಲನಾ ವೃತ್ತಿ ಪರೀಕ್ಷೆ

 


ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನೇಮಕಾತಿ ಸಂಖ್ಯೆ: 01/2019 ದಿನಾಂಕ: 10-12-2019 ರನ್ವಯ ಮೂಲ ದಾಖಲೆ, ದೈಹಿಕ ಅರ್ಹತೆ ಪರಿಶೀಲನೆಯಲ್ಲಿ ಅರ್ಹರಾದ ಅಭ್ಯರ್ಥಿಗಳ ಪ್ರಥಮ ಹಂತವಾಗಿ ಚಾಲಕ-ಕಂ-ನಿರ್ವಾಹಕ (ಪಜಾ-ಹಿಂಬಾಕಿ) ಹಾಗೂ ಚಾಲಕ ಮತ್ತು ಚಾಲಕ-ಕಂ-ನಿರ್ವಾಹಕ (Both) ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮಾತ್ರ ಚಾಲನಾ ವೃತ್ತಿ ಪರೀಕ್ಷೆಯನ್ನು ಡಿಸೆಂಬರ್ 14ರಿಂದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹುಮನಾಬಾದ್ ಪ್ರಾದೇಶಿಕ ತರಬೇತಿ ಕೇಂದ್ರ ಬೀದರ್-ಜಿಲ್ಲೆಯ ಚಾಲನಾ ಪಥದಲ್ಲಿ ಪ್ರಾರಂಭಿಸಲಾಗುವುದು. 

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಮಾತ್ರ ಸಂಸ್ಥೆಯ ವೆಬ್ ಸೈಟ್ www.nwkrtc.karnataka.gov.in ನಲ್ಲಿ ತಮ್ಮ ಅರ್ಜಿ ಸಂಖ್ಯೆ, ಜನ್ಮ ದಿನಾಂಕವನ್ನು ನಮೂದಿಸಿ ಕರೆ ಪತ್ರವನ್ನು ಮುದ್ರಿಸಿಕೊಂಡು ನಿಗದಿತ ಸ್ಥಳ, ದಿನಾಂಕ, ಸಮಯಕ್ಕೆ ಸರಿಯಾಗಿ ಹಾಜರಾಗಬೇಕು. 
ಚಾಲಕ ಹುದ್ದೆಯ ವೃತ್ತಿ ಪರೀಕ್ಷೆಯನ್ನು ಶೀಘ್ರದಲ್ಲಿಯೇ ಪ್ರಾರಂಭಿಸಲಾಗುವುದು ಎಂದು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಪ್ರಕಟಣೆ ತಿಳಿಸಿದೆ.

Ads on article

Advertise in articles 1

ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ

Advertise under the article

ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ