-->
AWARD: ಉಡುಪಿ ಜಿಲ್ಲಾ ಪಂಚಾಯತ್‌ಗೆ ದೇಶದ ಸರ್ವೋತ್ತಮ ಜಿಲ್ಲಾ ಪಂಚಾಯಿತಿ ಪ್ರಶಸ್ತಿ ಪ್ರಧಾನ

AWARD: ಉಡುಪಿ ಜಿಲ್ಲಾ ಪಂಚಾಯತ್‌ಗೆ ದೇಶದ ಸರ್ವೋತ್ತಮ ಜಿಲ್ಲಾ ಪಂಚಾಯಿತಿ ಪ್ರಶಸ್ತಿ ಪ್ರಧಾನ

 

ರಾಷ್ಟ್ರೀಯ ಪಂಚಾಯತ್ ಪುರಸ್ಕಾರ 2024ರ ಪ್ರಶಸ್ತಿಗಳ ಪ್ರದಾನ ಕಾರ್ಯಕ್ರಮ ನವದೆಹಲಿಯ ವಿಜ್ಞಾನ ಭವನದಲ್ಲಿ ಬುಧವಾರ ನಡೆಯಿತು. 

ರಾಷ್ಟ್ರಪತಿ ದ್ರೌಪದಿ ಮುರ್ಮುರವರಿಂದ ಪ್ರಶಸ್ತಿಯನ್ನು ಹಾಗೂ ಎರಡು ಕೋಟಿ ರೂಪಾಯಿ ಮೊತ್ತದ ಚೆಕ್ ಅನ್ನು ಉಡುಪಿ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರತೀಕ್ ಬಾಯಲ್  ಪಡೆದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಯೋಜನ ನಿರ್ದೇಶಕ ಶ್ರೀನಿವಾಸ್ ರಾವ್ ಉಪಸ್ಥಿತರಿದ್ದರು. ಸಂಪನ್ಮೂಲ ಕ್ರೋಢೀಕರಣಕ್ಕೆ ಒತ್ತು ನೀಡಿ ಶೇ.90ಕ್ಕೂ ಜಾಸ್ತಿ ತೆರಿಗೆ ವಸೂಲು, ಶೈಕ್ಷಣಿಕ ಕಾರ್ಯಕ್ರಮ ಅನುಷ್ಠಾನ, ಗುಣಮಟ್ಟ ಪರಿಶೀಲನೆ, ಶಾಲಾಭಿವೃದ್ಧಿಗೆ ಪ್ರತ್ಯೇಕ ಸಮಿತಿ ರಚನೆ, ಸಾಂಕ್ರಾಮಿಕ ರೋಗಗಳ ಸಮರ್ಥ ನಿರ್ವಹಣೆ,  ಶಿಶು, ಗರ್ಭಿಣಿ ಮರಣ ಸಂಭವಿಸದಂತೆ ನಿಗಾ, ಅಪೌಷ್ಟಿಕತೆ ನಿವಾರಣೆ, ಆನ್‌ಲೈನ್ ತೆರಿಗೆ ಪಾವತಿಗೆ ಕ್ರಮ, ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ನೀಟ್, ಸಿಇಟಿ ಕೋಚಿಂಗ್ ಮೂಲಕ ಎಸೆಸೆಲ್ಸಿ ಪಿಯುಸಿಯಲ್ಲಿ ಅಗ್ರಸ್ಥಾನ, ತ್ಯಾಜ್ಯ ನಿರ್ವಹಣೆಯಲ್ಲಿ ದೇಶಕ್ಕೆ ಮಾದರಿ, ಸಂಜೀವಿನಿ ಸಂಘಗಳ ಮೂಲಕ ಹಡಿಲು ಭೂಮಿ ಕೃಷಿ, ಗ್ರಾಮೀಣ ಭಾಗದಲ್ಲಿ ಎಂಆರ್‌ಎಫ್ ಘಟಕ ಸ್ಥಾಪನೆ, ಸೇರಿದಂತೆ ಮತ್ತಿತರ ಉತ್ತಮ ಕಾರ್ಯಗಳಿಂದ ಜಿಲ್ಲೆಗೆ  ಈ ಪ್ರಶಸ್ತಿ ಸಂದಿದೆ.

Ads on article

Advertise in articles 1

ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ

Advertise under the article

ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ