-->
NEWS: ಕಾಸರಗೋಡು ಜಿಲ್ಲಾ 7ನೇ ಚುಟುಕು ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ

NEWS: ಕಾಸರಗೋಡು ಜಿಲ್ಲಾ 7ನೇ ಚುಟುಕು ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ

 


ಚುಟುಕು ಸಾಹಿತ್ಯ ಪರಿಷತ್ ಕೇಂದ್ರ ಸಮಿತಿ ಮೈಸೂರು ಇದರ ಕೇರಳ ಗಡಿನಾಡ ಘಟಕವಾದ ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಶಿವರಾಮ ಕಾಸರಗೋಡು ಅಧ್ಯಕ್ಷತೆಯಲ್ಲಿ ಅಸ್ತಿತ್ವಕ್ಕೆ ಬಂದು 25 ವರ್ಷ ಪೂರೈಸುತ್ತಿದ್ದು ಇದರ ಬೆಳ್ಳಿ ಹಬ್ಬ ವರ್ಷಾಚರಣೆಯ ಸಂಭ್ರಮದ ಪ್ರಯುಕ್ತ ಕಾಸರಗೋಡು ಕನ್ನಡ ಗ್ರಾಮದಲ್ಲಿ 2025 ಮಾರ್ಚ್ 27 ಗುರುವಾರದಂದು ನಡೆಯುವ ಕಾಸರಗೋಡು ಜಿಲ್ಲಾ 7ನೇ ಚುಟುಕು ಸಾಹಿತ್ಯ ಸಮ್ಮೇಳನದ ಲಾಂಛನವನ್ನು ವಿಟ್ಲದಲ್ಲಿ ನಡೆದ ಬಂಟ್ವಾಳ ತಾಲೂಕು 6ನೇ ಚುಟುಕು ಸಾಹಿತ್ಯ ಸಮ್ಮೇಳನದ ವೇದಿಕೆಯಲ್ಲಿ ಮೈಸೂರು ಚುಟುಕು ಸಾಹಿತ್ಯ ಪರಿಷತ್ ಕೇಂದ್ರ ಸಮಿತಿಯ ಸ್ಥಾಪಕ ರಾಜ್ಯ ಪ್ರಧಾನ ಸಂಚಾಲಕ ಡಾ| ಎಂ. ಜಿ. ಆರ್. ಅರಸ್ ಬಿಡುಗಡೆಗೊಳಿಸಿದರು.

    ಸಂದರ್ಭದಲ್ಲಿ ದಕ್ಷಿಣ ಕನ್ನಡ  ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಹರೀಶ್ ಸುಲಾಯ ಒಡ್ಡoಬೆಟ್ಟು, ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಶಿವರಾಮ ಕಾಸರಗೋಡು, ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಗೋಪಾಲಕೃಷ್ಣ ಶಾಸ್ತ್ರಿ, ಸುಳ್ಯ ತಾಲೂಕು ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಶ್ರೀಮತಿ ಅಶ್ವಿನಿ ಕೋಡಿಬೈಲು, ಬಂಟ್ವಾಳ ತಾಲೂಕು ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಆನಂದ ರೈ ಅಡ್ಕಸ್ಥಳ , ರಾಧಾಕೃಷ್ಣ ಕೆ ಉಳಿಯತ್ತಡ್ಕ , ಇರಾ ನೇಮು ಪೂಜಾರಿ, ಮುಳಿಯ ಶಂಕರ ಭಟ್, ಸುದರ್ಶನ್ ಪಡಿಯಾರ್ ವಿಟ್ಲ, ವೇಣುಗೋಪಾಲ ಶೆಟ್ಟಿ ಮರುವಾಳ,ನಟರಾಜ ಮೈಸೂರು , ಶ್ರೀಮತಿ ಸೀತಾಲಕ್ಷ್ಮಿ ವರ್ಮ ವಿಟ್ಲ, ಮುಂತಾದ ಗಣ್ಯರು ಉಪಸ್ಥಿತರಿದ್ದರು.

     ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ,ಉಳ್ಳಾಲ, ಮುಲ್ಕಿ, ಬೆಳ್ತಂಗಡಿ, ಸುಳ್ಯ ಕಡಬ ,ಪುತ್ತೂರು ,ಮೂಡಬಿದ್ರೆ ತಾಲೂಕಿನ ಸುಮಾರು 100 ಮಂದಿ ಚುಟುಕು ಕವಿಗಳು ಮತ್ತು ವಿದ್ಯಾರ್ಥಿ ಕವಿಗಳು  ಭಾಗವಹಿಸಲು ಆಹ್ವಾನಿಸಲಾಗಿದೆ.

   ಕಾಸರಗೋಡು ಜಿಲ್ಲೆಯಿಂದ 100 ಮಂದಿ ಚುಟುಕು ಕವಿಗಳು ಭಾಗವಹಿಸುವಂತೆ ಆಹ್ವಾನಿಸಲಾಗಿದೆ. ಶಾಲಾ, ಕಾಲೇಜಿನ ವಿದ್ಯಾರ್ಥಿಗಳು,ಅದ್ಯಾಪಕರಿಗೂ, ಆಹ್ವಾನನೀಡಲಾಗಿದೆ.

      ಚುಟುಕು ಸಾಹಿತ್ಯ ಪರಿಷತ್ ಕೇಂದ್ರಸಮಿತಿ ಹಾಗೂ ಎಲ್ಲಾ ಜಿಲ್ಲಾ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಸುಮಾರು 200 ಮಂದಿ ಭಾಗವಹಿಸಲಿದ್ದಾರೆ.ವಿವರಗಳಿಗೆ ಸಂಪರ್ಕಿಸಿ: ಶಿವರಾಮ ಕಾಸರಗೋಡುಅಧ್ಯಕ್ಷರು ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್, ಕನ್ನಡ ಗ್ರಾಮ ಕಾಸರಗೋಡು -671121 ಮೊಬೈಲ್:-9448572016

 


Ads on article

Advertise in articles 1

ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ

Advertise under the article

ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ