-->
TIGER DEATH AT CHAMARAJANAGARA DISTRICT: ಐದು ಹುಲಿಗಳ ಅಸಹಜ ಸಾವು; ವಿಷಪ್ರಾಶನ ಶಂಕೆ, ತನಿಖೆಗೆ ಆದೇಶಿಸಿದ ಸಚಿವ ಖಂಡ್ರೆ

TIGER DEATH AT CHAMARAJANAGARA DISTRICT: ಐದು ಹುಲಿಗಳ ಅಸಹಜ ಸಾವು; ವಿಷಪ್ರಾಶನ ಶಂಕೆ, ತನಿಖೆಗೆ ಆದೇಶಿಸಿದ ಸಚಿವ ಖಂಡ್ರೆ

 

ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟ ವನ್ಯಧಾಮದ ಕೊಪ್ಪ ವಲಯ ಒಂದರಲ್ಲೇ 5 ಹುಲಿಗಳು ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿತ್ತು. ಕೇವಲ 50 ಅಡಿಗಳಷ್ಟು ಅಂತರಲ್ಲೇ ಐದು ಹುಲಿಗಳ ಶವಗಳು ಗುರುವಾರ ಬೆಳಗ್ಗೆ ಪತ್ತೆಯಾಗಿದ್ದವು. ಇದೀಗ ಈ ಸಾವಿನ ಕುರಿತು ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಆದೇಶ ಮಾಡಿದ್ದಾರೆ.

ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ನಾಲ್ಕು ಮರಿಗಳು ಅಸಜ ಸಾವಿಗೀಡಾಗಿರುವುದು ಅತ್ಯಂತ ನೋವಿನ ಸಂಗತಿಯಾಗಿದ್ದು, ಸರ್ಕಾರ ಇದನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಅಳಿವಿನಂಚಿನಲ್ಲಿರುವ ಹುಲಿಗಳ ಸಂರಕ್ಷಣೆಗೆ ದಿವಂಗತ ಪ್ರಧಾನಿ ಇಂದಿರಾ ಗಾಂಧಿ ಅವರು ಹುಲಿ ಯೋಜನೆ (ಪ್ರಾಜೆಕ್ಟ್ ಟೈಗರ್) ಆರಂಭಿಸಿದ ತರುವಾಯ ರಾಜ್ಯದಲ್ಲಿಯೂ ಹುಲಿಗಳ ಸಂರಕ್ಷಣೆಗೆ ಕ್ರಮ ವಹಿಸಲಾಗಿದೆ. 563 ಹುಲಿಗಳೊಂದಿಗೆ ಕರ್ನಾಟಕ ದೇಶದಲ್ಲೇ ಹುಲಿಗಳ ಸಂಖ್ಯೆಯಲ್ಲಿ 2ನೇ ಸ್ಥಾನದಲ್ಲಿದೆ. ಹುಲಿ ಸಂರಕ್ಷಣೆಗೆ ಹೆಸರಾಗಿರುವ ರಾಜ್ಯದಲ್ಲಿ, ಒಂದೇ ದಿನ ಐದು ಹುಲಿಗಳು ಅಸಹಜ ಸಾವಿಗೀಡಾಗಿರುವುದು ಅತ್ಯಂತ ನೋವು ತಂದಿದೆ. ಕೂಡಲೇ ಪಿಸಿಸಿಎಫ್ ನೇತೃತ್ವದಲ್ಲಿ ತಂಡ ರಚಿಸಿ, ಸ್ಥಳ ತನಿಖೆ ಕೈಗೊಂಡು, ಅರಣ್ಯ ಸಿಬ್ಬಂದಿ ನಿರ್ಲಕ್ಷ್ಯ ಇದ್ದರೆ ಅವರ ವಿರುದ್ಧ ಅಥವಾ ವಿದ್ಯುತ್ ಸ್ಪರ್ಶ, ವಿಷ ಪ್ರಾಷನ ಇತ್ಯಾದಿ ಸಾವಿಗೆ ಕಾರಣವಾಗಿದ್ದರೆ ಅದಕ್ಕೆ ಕಾರಣರಾದವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಕ್ರಮ ವಹಿಸುವಂತೆ ಮತ್ತು 3 ದಿನಗಳ ಒಳಗಾಗಿ ವರದಿಯನ್ನು ಈ ಕಚೇರಿಗೆ ಸಲ್ಲಿಸುವಂತೆ ಸೂಚಿಸಲಾಗಿದೆ.

5 tigers have died in the Kopa range of Malemahadeshwar Betta Wildlife Sanctuary in Chamarajanagar district. The bodies of the five tigers were found on Thursday morning within a distance of just 50 feet. Now, Forest Minister Eshwar Khandre has ordered an investigation into these deaths.

Ads on article

Advertise in articles 1

ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ

Advertise under the article

ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ