
Dakshina Kannada News: ವಿದ್ಯಾರ್ಥಿಗಳಲ್ಲಿ ಪರಿಸರ ಕುರಿತು ಕಾಳಜಿ ಮುಖ್ಯ : ಶ್ರೀನಿವಾಸ್ ನಾಯಕ್ ಇಂದಾಜೆ
Thursday, July 10, 2025
ಮಂಗಳೂರು, ವಿದ್ಯಾರ್ಥಿಗಳಲ್ಲಿ ಪರಿಸರ ಕುರಿತು ಕಾಳಜಿ ಮೂಡಿಸುವ ಅಗತ್ಯವಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಹೇಳಿದರು.
ಬಂಟ್ವಾಳ ತಾಲೂಕಿನ ತುಂಬೆಯ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂತ ಅಗ್ನೇಸ್ ಕಾಲೇಜು ವತಿಯಿಂದ ನಡೆದ ಸಂತ ಅಗ್ನೇಸ್ ಸಮುದಾಯದತ್ತ ಘಟಕ ಕಾರ್ಯಕ್ರಮದಡಿ ಯಲ್ಲಿ ನಡೆದ ವನ ಮಹೋತ್ಸವ ಕಾರ್ಯಕ್ರಮ ದಲ್ಲಿ ಭಾಗವಹಿಸಿ ಮಾತನಾಡಿದರು. ನಗರೀಕರಣದಿಂದಾಗಿ ಈಗ ರಸ್ತೆ ಬದಿಯ ಮರಗಳನ್ನು ಕಡಿಯಲಾಗುತ್ತಿದೆ. ಹೀಗಾಗಿ ನಗರ ಪ್ರದೇಶಲ್ಲಿ ಹೆಚ್ಚು ಗಿಡಗಳನ್ನು ನೆಡುವ ಅಗತ್ಯವಿದೆ. ಅತಿಯಾದ ಪ್ಲಾಸ್ಟಿಕ್ ಬಳಕೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆಯೂ ಜನರಲ್ಲಿ ಜಾಗ್ರತಿ ಮೂಡಿಸುವ ಅಗತ್ಯವಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕಾರ್ಯಕ್ರಮ ಸ0ಯೋಜಕಿ ಡಾ. ಶೈಲಜಾ ರೈ, ವಿನೀತಾ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ್ಯೋಪದ್ಯಾಯಿನಿ ಶಕುಂತಲಾ ಎಸ್ ಉಳ್ಳಾಲ್, ಸಂತ ಅಗ್ನೇಸ್ ಕಾಲೇಜು ವಿದ್ಯಾರ್ಥಿಗಳು, ತುಂಬೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.