-->
Mangalore: ಮಯೂರ ಪ್ರತಿಷ್ಠಾನ ಮಂಗಳೂರು : ಮಯೂರ ಯಾನ -1

Mangalore: ಮಯೂರ ಪ್ರತಿಷ್ಠಾನ ಮಂಗಳೂರು : ಮಯೂರ ಯಾನ -1

 


ಆ.9ರಂದು ಯಕ್ಷ ವೇಷಭೂಷಣ ಉದ್ಘಾಟನೆ, ಯಕ್ಷಗಾನ ಬಯಲಾಟ
ಮಯೂರ ಪ್ರತಿಷ್ಠಾನ ಮಂಗಳೂರು ಇದರ ಪ್ರಥಮ ವಾರ್ಷಿಕೋತ್ಸವ ಹಾಗೂ ಯಕ್ಷ ಗುರು ರಕ್ಷಿತ್ ಪಡ್ರೆ ಶಿಷ್ಯವೃಂದದ ನೂತನ ಯಕ್ಷವೇಷಭೂಷಣ ಉದ್ಘಾಟನಾ ಕಾರ್ಯಕ್ರಮ ಮಯೂರಯಾನ-1 ಕಟೀಲು ರಥಬೀದಿ ಶ್ರೀ ಸರಸ್ವತಿ ಸದನದಲ್ಲಿ ಆ.9ರಂದು ನಡೆಯಲಿದೆ.


ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆನುವಂಶಿಕ ಅರ್ಚಕ ಹರಿದಾಸ ಆಸ್ರಣ್ಣ ಅವರು ನೂತನ ವೇಷಭೂಷಣವನ್ನು ಉದ್ಘಾಟಿಸಿ ಆಶೀರ್ವಚನ ನೀಡಲಿರುವರು.  


ಹಿರಿಯ ನ್ಯಾಯವಾದಿ, ಮಯೂರ ಪ್ರತಿಷ್ಠಾನದ ಅಧ್ಯಕ್ಷ ಪಿ.ಸದಾಶಿವ ಐತಾಳ ಅವರು ಅಧ್ಯಕ್ಷತೆ ವಹಿಸಲಿರುವರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹ ನಿರ್ದೇಶಕ ರಾಜೇಶ್ ಕೆ., ಪಣಂಬೂರು ಪಿ.ವಿ.ಐತಾಳ ಇಂಗ್ಲೀಷ್ ಯಕ್ಷಗಾನ ಬಳಗದ ಸಂಚಾಲಕ ಪಿ.ಸಂತೋಷ್ ಐತಾಳ, ನಿಡ್ಡೋಡಿ ಜ್ಞಾನರತ್ನ ಎಜುಕೇಶನ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಭಾಸ್ಕರ ದೇವಸ್ಯ, ಮಂಗಳೂರು ಯಕ್ಷ ಮಂಜೂಷ ನಿರ್ದೇಶಕಿ ವಿದ್ಯಾ ಕೂಳ್ಯೂರು ಅತಿಥಿಗಳಾಗಿ ಭಾಗವಹಿಸಿಲಿರುವರು.


ಸಂಜೆ ಗಂಟೆ 4.30ರಿಂದ ಕಾರ್ಯಕ್ರಮ ಆರಂಭಗೊಳ್ಳಲಿದ್ದು,5.30ರ ವರೆಗೆ ಪೂರ್ವ ರಂಗ, ಬಳಿಕ ಸಭಾ ಕಾರ್ಯಕ್ರಮ, ಗಂಟೆ 7ರಿಂದ ಮಯೂರ ಪ್ರತಿಷ್ಠಾನ ಕಲಾವಿದರಿಂದ ಯಕ್ಷಗಾನ ಬಯಲಾಟ ಅಶ್ವಮೇಧ ಪ್ರದರ್ಶನ ನಡೆಯಲಿದೆ ಎಂದು ಪ್ರತಿಷ್ಠಾನ ಅಧ್ಯಕ್ಷ ಕೆ.ಸದಾಶಿವ ಐತಾಳ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ

Ads on article

Advertise in articles 1

ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ

Advertise under the article

ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ